ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಳೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ನಾಲ್ಕೈದು ದಿನ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂಗಾರು ಅಂತ್ಯದ ವೇಳೆ ಮತ್ತೆ ಈಗ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,ಮತ್ತು ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಕಲಬುರಗಿ, ಬೀದರ್, ರಾಯಚೂರು, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಕರ್ನಾಟಕದ ಪೂರ್ವ ಭಾಗಕ್ಕೆ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನ ಕರಾಔಳಿ ಹಾಗೂ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ನವರಾತ್ರಿ ಸಂಭ್ರಮದಲ್ಲಿ ಜನರಿಗೆ ಮಳೆರಾಯ ಅಡ್ಡಿಯುಂಟು ಮಾಡಬಹುದು. ನದಿ ತೀರಕ್ಕೆ ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ. ಇತ್ತ ಪಶ್ಚಿಮ ಘಟ್ಟಗಳಲ್ಲಿ ಮಳೆಯಾಗುತ್ತಿದ್ದು, ಕೃಷ್ಣ ನದಿಯ ಒಳಹರಿವು ಪ್ರಮಾಣ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಸಿಂಚನ ಆಗುತ್ತಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement