ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅಕ್ಟೋಬರ್‌ 1ರಂದು ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2022 ಪರಿಷ್ಕೃತ ರ್‍ಯಾಂಕ್‌ ಪಟ್ಟಿಯ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್‌ 1ಕ್ಕೆ ಮುಂದೂಡಿದೆ.
ಈ ಹಿಂದೆ ಸೆಪ್ಟೆಂಬರ್‌ 29ರಂದು ಪಟ್ಟಿ ಪ್ರಕಟಿಸುವುದಾಗಿ ಹೇಳಲಾಗಿತ್ತು. ಆದರೆ ಪಟ್ಟಿ ಪ್ರಕಟಿಸಲು ತಾಂತ್ರಿಕ ಕೆಲಸಗಳು ನಡೆಯಬೇಕಿರುವ ಹಿನ್ನೆಲೆಯಲ್ಲಿ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕೆಇಎ ಮೂಲಗಳಿಂದ ತಿಳಿದುಬಂದಿದೆ.
ಪರಿಷ್ಕೃತ ರ್‍ಯಾಂಕ್‌ ಪಟ್ಟಿಗಾಗಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಎಂಜಿನಿಯರಿಂಗ್‌ ಕೋರ್ಸ್‌ಗೆ ಮಾತ್ರ ಅನ್ವಯವಾಗಲಿದ್ದು, ಉಳಿದ ಕೋರ್ಸ್‌ಗಳಾದ ಬಿ.ಎಸ್ಸಿ. ಕೃಷಿ, ಪಶುಸಂಗೋಪನೆ, ಫಾರ್ಮ, ಯೋಗ ಕೋರ್ಸ್‌ಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement