ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗಳಿಕೆ ರಜೆ ಮೊತ್ತ ಪಾವತಿ

posted in: ರಾಜ್ಯ | 0

ಬೆಂಗಳೂರು : ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದು, ದಸರಾ ಹಬ್ಬದ ನಿಮಿತ್ತ ಅಕ್ಟೋಬರ್ 3 ರಂದು ಎಲ್ಲ ಅರ್ಹ ಸಿಬ್ಬಂದಿಗೆ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಕೋವಿಡ್ ಕಾರಣದಿಂದಾಗಿ ನಿಗಮವು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸಹ ಸಿಬ್ಬಂದಿ ದಕ್ಷತೆಯ ಸೇವೆಯಿಂದ ಕಾರ್ಯಾಚರಣೆಯಲ್ಲಿ ಸ್ಥಿರತೆ ಸಾಧಿಸುವತ್ತ ಹಾಗೂ ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸುವ ನಿಟ್ಟಿನಲ್ಲಿ ಮುನ್ನಡೆದಿದ್ದೇವೆ. ಕಳೆದೆರಡು ವರ್ಷಗಳಲ್ಲಿ ನಿಗಮದ ಕ್ಲಿಷ್ಟಕರವಾದ ಆರ್ಥಿಕ ಪರಿಸ್ಥಿತಿಯಿಂದಾಗಿ ಸಿಬ್ಬಂದಿಗಳಿಗೆ ಪಾವತಿಸಬೇಕಾಗಿದ್ದ ಗಳಿಕೆ ರಜೆ ನಗದೀಕರಣವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ.
ನಿಗಮದ ಆರ್ಥಿಕ ಪರಿಸ್ಥಿತಿ ಇನ್ನೂ ಚೇತರಿಕೆ ಹಂತದಲ್ಲಿದ್ದರೂ ಸಹ, ಈಗ ಸಿಬ್ಬಂದಿ ಹಾಗೂ ಕುಟುಂಬದವರು ನಾಡಹಬ್ಬ ದಸರಾದ ಸಡಗರ ಹೆಚ್ಚಿಸಲು ಅಕ್ಟೋಬರ್ 3ರಂದು 2021-22ನೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ನಿಗಮದ ಎಲ್ಲ ಅರ್ಹ ಸಿಬ್ಬಂದಿಗೆ ಪಾವತಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ʼಬಿಜೆಪಿಗರೇ ನಾನೂ ರೌಡಿ, ನಂಗೂ ಪಕ್ಷದಲ್ಲಿ ಸ್ಥಾನ ಕೊಡಿ’ ಎಂದು ಬೋರ್ಡ್​ ಹಿಡಿದು ನಿಂತ ರೌಡಿ ಶೀಟರ್​ ಈಗ ಪೊಲೀಸ್​ ಅತಿಥಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement