ಭಾರತದ ಕ್ರಿಕೆಟ್‌ ತಂಡಕ್ಕೆ ಆಘಾತ: ಬೆನ್ನು ನೋವಿನ ಸಮಸ್ಯೆ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಕ್ಕೆ

ನವದೆಹಲಿ: ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ.
ಬೆನ್ನು ನೋವಿನ ಕಾರಣ ಬುಮ್ರಾ ಈ ಹಿಂದೆ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು. ಸೆಪ್ಟೆಂಬರ್ 25 ರಂದು ಅವರು ಆಸ್ಟ್ರೇಲಿಯಾ ವಿರುದ್ಧದ ಅಂತಿಮ T20 ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 50 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು.
T20 ವಿಶ್ವಕಪ್‌ನಿಂದ ಬುಮ್ರಾ ಹೊರಗುಳಿಯುವುದು ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಐಸಿಸಿ ಟಿ20 ವಿಶ್ವಕಪ್ ಅಕ್ಟೋಬರ್ 16ರಂದು ಆರಂಭವಾಗಲಿದ್ದು, 16 ದೇಶಗಳು ಭಾಗವಹಿಸಲಿವೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬುಮ್ರಾ ಅವರ ಬದಲಿಗೆ ಸ್ಟ್ಯಾಂಡ್‌ಬೈನಲ್ಲಿರುವ ಇಬ್ಬರು ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ ಅಥವಾ ದೀಪಕ್ ಚಹರ್ ಅಕ್ಟೋಬರ್ 16 ರಂದು ಆಸ್ಟ್ರೇಲಿಯಾದ ವಿಕ್ಟೋರಿಯಾದ ಗೀಲಾಂಗ್ ಕ್ರಿಕೆಟ್ ಮೈದಾನದಲ್ಲಿ ಪ್ರಾರಂಭವಾಗುವ ICC T20 ವಿಶ್ವಕಪ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತಾರೆ.
ಬೆನ್ನುನೋವಿನ ಕಾರಣ ಬುಮ್ರಾ ಈ ಹಿಂದೆ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು.
ಬುಮ್ರಾ ಟಿ20 ವಿಶ್ವಕಪ್‌ ಪಂದ್ಯವನ್ನು ಖಚಿತವಾಗಿ ಆಡುವುದಿಲ್ಲ. ಅವರಿಗೆ ಬೆನ್ನುಮೂಳೆಯ ಗಂಭೀರ ಸ್ಥಿತಿ ಇದೆ. ಅವರು ಆರು ತಿಂಗಳ ಅವಧಿಗೆ ಹೊರಗುಳಿಯಬಹುದು ”ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಟಿಆರ್‌ಎಸ್ ಕಾರ್ಯಕರ್ತರು-ವೈಎಸ್‌ಆರ್ ತೆಲಂಗಾಣ ಪಕ್ಷದ ಕಾರ್ಯಕರ್ತರ ಘರ್ಷಣೆ ನಂತರ ಸಿಎಂ ಜಗನ್ ಸಹೋದರಿ ವೈಎಸ್ ಶರ್ಮಿಳಾ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement