ಮರಳು ಗಣಿಗಾರಿಕೆಗಾಗಿ ಎರಡು ಗುಂಪುಗಳ ಘರ್ಷಣೆ, ನಾಲ್ವರ ಸಾವು; ಮೃತ ದೇಹಗಳನ್ನೂ ತಮ್ಮೊಂದಿಗೆ ಹೊತ್ತೊಯ್ದ ಗುಂಪುಗಳು..!

ಪಾಟ್ನಾ: ಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ವರದಿಯಾಗಿದೆ.
ಬಿಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಾಬಾದ್ ಗ್ರಾಮದ ಸೋನೆ ನದಿ ದಂಡೆಯಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಘರ್ಷಣೆ ನಡೆದಿದೆ. ನಿರ್ಮಾಣ ಉದ್ದೇಶಗಳಿಗಾಗಿ ಸೋನೆ ನದಿಯ ಮರಳನ್ನು ಉತ್ತಮ ಗುಣಮಟ್ಟವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ದೊಡ್ಡ ಬೇಡಿಕೆಯಿಂದಾಗಿ ಅದರ ಬೆಲೆ ಹೆಚ್ಚಾಗಿರುತ್ತದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬುಧವಾರ ರಾತ್ರಿ 11:30ರ ಸುಮಾರಿಗೆ ಫೌಜಿ ಗುಂಪು ಮತ್ತು ಸಿಪಾಹಿ ಗುಂಪಿನ ನಡುವೆ ಘರ್ಷಣೆ ಆರಂಭವಾಯಿತು. ನಿರ್ದಿಷ್ಟ ಸ್ಥಳದಲ್ಲಿ ಮರಳು ಗಣಿಗಾರಿಕೆ ಕುರಿತು ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದರು ಮತ್ತು ನಂತರ ಅದು ಹಿಂಸಾಚಾರಕ್ಕೆ ತಿರುಗಿತು. ಪರಸ್ಪರ ಗುಂಡು ಹಾರಿಸತೊಡಗಿದರು. ಈ ಗುಂಡಿನ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ರಾತ್ರಿಯಿಡೀ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಸ್ಥಳೀಯ ಪೊಲೀಸರು ಅಲ್ಲಿಗೆ ಹೋಗಿ ಶಾಂತಿ ಸ್ಥಾಪಿಸಲು ಧೈರ್ಯ ಮಾಡಲಿಲ್ಲ.
ಈ ಗುಂಪುಗಳು ಮೃತದೇಹಗಳನ್ನೂ ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಟಿಆರ್‌ಎಸ್ ಕಾರ್ಯಕರ್ತರು-ವೈಎಸ್‌ಆರ್ ತೆಲಂಗಾಣ ಪಕ್ಷದ ಕಾರ್ಯಕರ್ತರ ಘರ್ಷಣೆ ನಂತರ ಸಿಎಂ ಜಗನ್ ಸಹೋದರಿ ವೈಎಸ್ ಶರ್ಮಿಳಾ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement