ಲಖಿಂಪುರ್ ಖೇರಿ ಬಸ್-ಟ್ರಕ್ ಡಿಕ್ಕಿ: ಗಾಯಗೊಂಡ ಮಗುವಿನ ತಾಯಿಯೊಂದಿಗೆ ಮಾತನಾಡುವಾಗ ಕಣ್ಣೀರಿಟ್ಟ ವಿಭಾಗೀಯ ಆಯುಕ್ತೆ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಕನಿಷ್ಠ ಹತ್ತು ಮಂದಿ ಮೃತಪಟ್ಟಿದ್ದು, 41 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ 12 ಮಂದಿಯನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಗಿದ್ದು, ಇತರರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಲಕ್ನೋ ವಿಭಾಗೀಯ ಆಯುಕ್ತ ರೋಷನ್ ಜೇಕಬ್ ಗಾಯಾಳುಗಳ ಕುಟುಂಬಗಳೊಂದಿಗೆ ಸಂವಹನ ನಡೆಸುವಾಗ ದುಃಖ ಉಮ್ಮಳಿಸಿ ಕಣ್ಣೀರು ಹಾಕುತ್ತಿರುವುದನ್ನು ಕಾಣಬಹುದು. ವೀಡಿಯೊದಲ್ಲಿ, ಅಪಘಾತದಲ್ಲಿ ಗಾಯಗೊಂಡ ಮಗುವಿನ ಆರೋಗ್ಯದ ಬಗ್ಗೆ ರೋಷನ್‌ ಜೇಕಬ್ ಅವರು ಗಾಯಾಳು ಮಕ್ಕಳಿಗೆ ಚಿಕಿತ್ಸೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಕಣ್ಣೀರಿಡುತ್ತಲೇ ನಿರ್ದೇಶಿಸಿದರು.

ತಿರುವನಂತಪುರದಲ್ಲಿ ಜನಿಸಿದ ಜಾಕೋಬ್ 2004ರ ಬ್ಯಾಚ್‌ನ ಐಎಎಸ್ ಅಧಿಕಾರಿ. ಎರಡು ವಾರಗಳ ಹಿಂದೆ ಲಕ್ನೋದ ನೀರು ತಂಬಿಕೊಂಡಿದ್ದ ಜಲಾವೃತ ಬೀದಿಗಳಲ್ಲಿ ಮಳೆ ಹಾನಿ ಪರಿಶೀಲಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದಾಗ ಅವರು ಗಮನ ಸೆಳೆದಿದ್ದರು.

ಉತ್ತರ ಪ್ರದೇಶ ಪೊಲೀಸರ ಪ್ರಕಾರ, ರಾಷ್ಟ್ರೀಯ ಹೆದ್ದಾರಿ 730 ರ ಐರಾ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ. ಬಸ್ ಧೌರ್ಹರಾದಿಂದ ಲಕ್ನೋಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಅಪಘಾತದಿಂದ ಮೃತಪಟ್ಟವರ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅನೇಕ ಜನರು ಸಾವನ್ನಪ್ಪಿದ ಸುದ್ದಿಯಿಂದ ತೀವ್ರ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅಧ್ಯಕ್ಷರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
“ಯುಪಿಯ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತರಾಗಿದ್ದಾರೆ. ಮೃತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. PMNRF ನಿಂದ ಪ್ರತಿ ಸತ್ತವರ ಕುಟುಂಬಕ್ಕೆ ₹ 2 ಲಕ್ಷ ನೀಡಲಾಗುವುದು. ಗಾಯಾಳುಗಳಿಗೆ ₹ 50,000 ನೀಡಲಾಗುವುದು.” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement