ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡಿ ಬೊಮ್ಮಾಯಿ ಆದೇಶ

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಹಿರಿಯ ಸಹಾಯಕ ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ ಆದೇಶಿಸಿದ್ದಾರೆ.

ಆಗಸ್ಟ್‌ 26 ರಂದು ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಈ ವೇಳೆ ಪ್ರವೀಣ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರವೀಣ ಪತ್ನಿಗೆ ಸರ್ಕಾರದ ಹುದ್ದೆ ಕೊಡುವ ಭರವಸೆ ನೀಡಿದ್ದರು. ಈಗ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಗುತ್ತಿಗೆ ಆಧಾರಿತ ಸರ್ಕಾರಿ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement