ಡಿಸೆಂಬರ್‌ 31ರ ಒಳಗಡೆ ಬಿಬಿಎಂಪಿ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್​ 31ರ ಒಳಗೆ ನಡೆಸುವಂತೆ ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶಿಸಿದೆ.
ಮೀಸಲಾತಿ ಸರಿಪಡಿಸಲು 16 ವಾರಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ ಸರ್ಕಾರದ ವಿರುದ್ಧ ಗರಂ ಆದ ಹೈಕೋರ್ಟ್ ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ಚಾಟಿ ಬೀಸಿದೆ.
ಬಿಬಿಎಂಪಿ ಮೀಸಲಾತಿ ವಿಚಾರವಾಗಿ ಮೀಸಲಾತಿ ಸರಿಪಡಿಸಲು 4 ತಿಂಗಳು ಕಾಲಾವಕಾಶ ಬೇಕೆಂದು ಸರ್ಕಾರ ಕೋರ್ಟ್‍ಗೆ ಮನವಿ ಸಲ್ಲಿಸಿತ್ತು. ಬಿಬಿಎಂಪಿ ಮೀಸಲಾತಿ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ 2 ತಿಂಗಳ ಒಳಗಾಗಿ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿ ಎಂದು ಆದೇಶಿಸಿದೆ.

ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು. ನವೆಂಬರ್ 30ಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು. ನವೆಂಬರ್ 30 ರಿಂದ ಡಿಸೆಂಬರ್ 31 ರವರೆಗೆ ಚುನಾವಣೆ ಪ್ರಕ್ರಿಯೆ ಮುಗಿಯಬೇಕು. ವರ್ಷದ ಅಂತ್ಯದ ಒಳಗೆ ಚುನಾವಣೆ ಮುಕ್ತಾಯಗೊಳಿಸಿ ಎಂದು ಸರ್ಕಾರಕ್ಕೆ ಗಡುವು ನಿಗದಿಪಡಿಸಿದೆ.

ಬಿಬಿಎಂಪಿ ಚುನಾವಣೆಗೆ ಸರ್ಕಾರ ಹೊರಡಿಸಿದ್ದ ವಾರ್ಡ್​​ವಾರು ಮೀಸಲು ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಮಹಿಳಾ ಮತ್ತು ಒಬಿಸಿಗೆ ಯಾದೃಚ್ಚಿಕ (ರ‍್ಯಾಂಡಮ್) ಆಧಾರದ ಮೇಲೆ ಮೀಸಲು ನಿಗದಿಪಡಿಸಿರುವ ಕಾರಣ ಮೀಸಲು ಅಧಿಸೂಚನೆ ರದ್ದುಪಡಿಸಿರುವುದಾಗಿ ಹೈಕೋರ್ಟ್ ಹೇಳಿದೆ. ನ್ಯಾ. ಡಾ.ಭಕ್ತವತ್ಸಲ ಆಯೋಗಕ್ಕೆ ಒಬಿಸಿ ಅಂಕಿ – ಅಂಶಗಳನ್ನು ಸರ್ಕಾರ ನೀಡುವ ಮೂಲಕ ಸೂಕ್ತ ಸಹಕಾರ ನೀಡಿ ಮೀಸಲು ನಿಗದಿ ಪಡಿಸಬೇಕು ಎಂದು ಸೂಚಿಸಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement