
ಅಹ್ಮದಾಬಾದ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇದು ಮುಜುಗರದ ಕ್ಷಣ. ಕೇಜ್ರಿವಾಲ್ ಅವರನ್ನು ಮನೆಗೆ ಊಟಕ್ಕೆ ಕರೆದು ಆತಿಥ್ಯ ನೀಡಿದ್ದ ಆಟೋ ಚಾಲಕ ವಿಕ್ರಮ್ ದಾತಾನಿ ಈಗ ಮೋದಿ ಅಭಿಮಾನಿಯಾಗಿದ್ದಾರೆ…! ಮೂಲಗಳ ಪ್ರಕಾರ, ಈ ವ್ಯಕ್ತಿ ಬಿಜೆಪಿ ಟೋಪಿ ಧರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೆ ಆಗಮಿಸಿದ್ದರು.
ಮೋದಿ ರ್ಯಾಲಿಯಲ್ಲಿ ಏಕೆ ಇದ್ದೀರಿ ಎಂದು ಕೇಳಿದಾಗ ಚಾಲಕ, “ನಾನು ಬಾಲ್ಯದಿಂದಲೂ ಮೋದಿ ಅವರ ಅಭಿಮಾನಿ. ಆಟೊ ರಿಕ್ಷಾ ಒಕ್ಕೂಟದ ಆದೇಶದ ಮೇರೆಗೆ ನಾನು ಕೇಜ್ರಿವಾಲ್ ಅವರನ್ನು ನನ್ನ ಮನೆಗೆ ಆಹ್ವಾನಿಸಬೇಕಾಯಿತು” ಎಂದು ಹೇಳಿದ್ದಾರೆ.
ಕೇಜ್ರಿವಾಲ್ ದಾತಾನಿಯ ಮನೆಗೆ ಊಟಕ್ಕೆ ಆಗಮಿಸಿದ್ದಾಗ, “ನಾನು ನಿಮ್ಮ ಅಭಿಮಾನಿ” ಎಂದು ಹೇಳಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯ ಆಪ್ ಪ್ರಚಾರದ ಭಾಗವಾಗಿ ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದ ಕೇಜ್ರಿವಾಲ್, ಮಧ್ಯಾಹ್ನ ಅಹಮದಾಬಾದ್‌ನಲ್ಲಿ ಆಟೋ ರಿಕ್ಷಾ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಅವರ ಭಾಷಣದ ನಂತರ, ನಗರದ ಘಟ್ಲೋಡಿಯಾ ಪ್ರದೇಶದ ನಿವಾಸಿ ವಿಕ್ರಂ ದಾತಾನಿ ಎಂಬ ಆಟೋ ರಿಕ್ಷಾ ಚಾಲಕ ಕೇಜ್ರಿವಾಲ್ ಅವರ ಮನೆಯಲ್ಲಿ ರಾತ್ರಿ ಊಟ ಮಾಡುವಂತೆ ಮನವಿ ಮಾಡಿದರು. “ನಾನು ನಿಮ್ಮ ಅಭಿಮಾನಿ. ಸೋಷಿಯಲ್ ಮೀಡಿಯಾದಲ್ಲಿ ನಾನು ನೋಡಿದ ವೀಡಿಯೊದಲ್ಲಿ, ನೀವು ಪಂಜಾಬ್‌ನ ಆಟೋ ಡ್ರೈವರ್‌ನ ಮನೆಗೆ ಊಟಕ್ಕೆ ಹೋಗಿದ್ದೀರಿ. ಹಾಗಾದರೆ, ನೀವು ನನ್ನ ಮನೆಗೆ ಊಟಕ್ಕೆ ಬರುತ್ತೀರಾ?” ದಾತಾನಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಕೇಳಿದ್ದರು.
ಆಹ್ವಾನಕ್ಕೆ ದೆಹಲಿ ಮುಖ್ಯಮಂತ್ರಿ ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. “ಪಂಜಾಬ್ ಮತ್ತು ಗುಜರಾತ್‌ನ ಆಟೋವಾಲಾಗಳು ನನ್ನನ್ನು ಪ್ರೀತಿಸುತ್ತಾರೆ. ನಾನು ಇಂದು ಸಂಜೆ ಬರಬೇಕೇ? ರಾತ್ರಿ 8 ಗಂಟೆಗೆ ಬರುತ್ತೇನೆ ಎಂದು ಎಎಪಿ ನಾಯಕ ಹೇಳಿದ್ದರು. ಕೇಜ್ರಿವಾಲ್ ಅವರನ್ನು ತನ್ನ ಹೋಟೆಲ್‌ನಿಂದ ತನ್ನ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದರು. ಆದರೆ ಈಗ ಆಟೊ ಚಾಲಕ ವಿಕ್ರಂ ದಾತಾನಿ ಮೋದಿ ಅಭಿಮಾನಿಯಾಗಿ ಮಾರ್ಪಾಡಾಗಿದ್ದಾರೆ..!


ನಿಮ್ಮ ಕಾಮೆಂಟ್ ಬರೆಯಿರಿ