ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂನಿಂದ ನ್ಯಾ. ಪಿ ಬಿ ವರಾಲೆ ಹೆಸರು ಶಿಫಾರಸು

ಬೆಂಗಳೂರು: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆ.28ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಸ್ತಾವವನ್ನು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಕಳುಹಿಸಲಿದೆ.
ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಿತುರಾಜ್ ಅವಸ್ಥಿ ಜುಲೈ 2ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ 1962ರ ಜೂ.23ರಂದು ಜನಿಸಿದ ಪ್ರಸನ್ನ ಬಿ.ವರಾಲೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲಾ ಮತ್ತು ಕಾನೂನು ಪದವಿ ಪಡೆದಿದ್ದಾರೆ. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್‌ ಎನ್‌ ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ವರಾಲೆ ಪ್ರಾಕ್ಟೀಸ್‌ ಆರಂಭಿಸಿದರು.1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

ಪ್ರಮುಖ ಸುದ್ದಿ :-   ಎಸ್‌ಐಆರ್‌ : ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ ; 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement