ಕೊಳದಲ್ಲಿ ಟ್ರ್ಯಾಕ್ಟರ್ ಬಿದ್ದು ಮಹಿಳೆಯರು, ಮಕ್ಕಳು ಸೇರಿ 26 ಯಾತ್ರಿಕರು ಸಾವು

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿ ಕನಿಷ್ಠ 26 ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ. ಹಾಗೂ ಎರಡು ಡಜನ್‌ಗೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
50 ಜನರಿದ್ದ ಟ್ರ್ಯಾಕ್ಟರ್ ಉನ್ನಾವೊದ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಭಯಾನಕ ದೃಶ್ಯಗಳಲ್ಲಿ, ಬರಿಗೈಯಲ್ಲಿ ಜನರು ಕೊಳದಿಂದ ದೇಹಗಳನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹ 50,000 ಧನಸಹಾಯ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಹಿರಿಯ ಸಚಿವರಾದ ರಾಕೇಶ್ ಸಚನ್ ಮತ್ತು ಅಜಿತ್ ಪಾಲ್ ಅವರನ್ನು ಅಪಘಾತ ಸ್ಥಳಕ್ಕೆ ಕಳುಹಿಸಿ ಪರಿಹಾರ ಮತ್ತು ರಕ್ಷಣಾ ಕ್ರಮಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯ ನಂತರ, ಮುಖ್ಯಮಂತ್ರಿಗಳು ಸಾರಿಗೆ ಉದ್ದೇಶಗಳಿಗಾಗಿ ಟ್ರ್ಯಾಕ್ಟರ್ ಟ್ರಾಲಿಯನ್ನು ಬಳಸದಂತೆ ಜನರಿಗೆ ಮನವಿ ಮಾಡಿದ್ದಾರೆ. ಕೃಷಿ ಕೆಲಸಗಳಿಗೆ ಹಾಗೂ ಸರಕು ಸಾಗಣೆಗೆ ಟ್ರ್ಯಾಕ್ಟರ್ ಟ್ರಾಲಿ ಬಳಸಬೇಕು ಎಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಾಚರಣೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಸರ್ಕಾರದ ವಕ್ತಾರರು ಲಕ್ನೋದಲ್ಲಿ ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಟಿಆರ್‌ಎಸ್ ಕಾರ್ಯಕರ್ತರು-ವೈಎಸ್‌ಆರ್ ತೆಲಂಗಾಣ ಪಕ್ಷದ ಕಾರ್ಯಕರ್ತರ ಘರ್ಷಣೆ ನಂತರ ಸಿಎಂ ಜಗನ್ ಸಹೋದರಿ ವೈಎಸ್ ಶರ್ಮಿಳಾ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement