ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರನಿಂದ ಪಾಲಿಕೆ ಮಹಿಳಾ ಸಿಬ್ಬಂದಿಗೆ ಬ್ಲಾಕ್ ಮೇಲ್: ಧರ್ಮದೇಟು

posted in: ರಾಜ್ಯ | 1

ತುಮಕೂರು: ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇರೆಗೆ ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ ಎಂಬವನಿಗೆ ಗೂಸಾ ನೀಡಿದ್ದಾರೆ. ಇದಲ್ಲದೇ ಮಾನವ ಹಕ್ಕುಗಳ ಕಾರ್ಯಕರ್ತರು ಎಂದು ಹೇಳಿಕೊಂಡು ಬಂದಿದ್ದ ಯುವತಿಯರಿಗೂ ಸಾರ್ವಜನಿಕರು ಥಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರದೀಪ ವಾರಪತ್ರಿಕೆಯೊಂದರ ಸಂಪಾದಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಈತ ಸಬ್ಸಿಡಿ ಸಾಲ ಮಂಜೂರು ಮಾಡಿಕೊಡುವಂತೆ ನಗರ ಜೀವನೋಪಾಯ ಕೇಂದ್ರಕ್ಕೆ ಹೋಗಿದ್ದಾಗ ಲಂಚದಾಸೆ ತೋರಿಸಿ ವೀಡಿಯೋ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬಳಿಕ ಈ ವೀಡಿಯೋ ತೋರಿಸಿ ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್‌ಸಿ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ನಿನ್ನೆ ಸಂಜೆ ಆ ಯುವತಿ ಕೆಲಸ ಮಾಡುವ ಜಾಗಕ್ಕೆ ಬಂದು ಬೆದರಿಕೆ ಹಾಕುತ್ತಿದ್ದಾಗ ಅಲ್ಲಿದ್ದವರು ಧರ್ಮದೇಟು ನೀಡಿದ್ದಾರೆ. ಅಷ್ಟೇ ಅಲ್ಲದೇ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರದೀಪ್‍ನ ಜೊತೆ ಬಂದಿದ್ದ ನಕಲಿ ಪತ್ರಕರ್ತರು ಸೇರಿ ಹ್ಯೂಮನ್ ರೈಟ್ಸ್ ಎಂದು ಹೇಳಿಕೊಂಡು ಬಂದವರಿಗೂ ಏಟು ಬಿದ್ದಿದೆ. ಘಟನೆಗೆ ಸಂಬಂಧಿಸಿ ಬ್ಲಾಕ್ ಮೇಲ್‍ಗೆ ಮುಂದಾಗಿದ್ದ ನಾಲ್ವರು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಓಲಾ, ಉಬರ್‌ ಆಟೋ ಸರ್ವಿಸ್‌ : ಶೇ.5 ಸೇವಾ ಶುಲ್ಕ, ಜಿಎಸ್‌ಟಿ ಸೇರಿಸಿ ಪ್ರಯಾಣ ದರ ನಿಗದಿ ಕುರಿತು ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement