ಕಾರ್ಯಕ್ರಮಕ್ಕೆ ಅಡ್ಡಿ, ಸಿ.ಪಿ. ಯೋಗೇಶ್ವರ ಕಾರಿನ ಮೇಲೆ ಕಲ್ಲು ತೂರಾಟ: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ರಾಮನಗರ: ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು.
ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದಲ್ಲಿತ್ತು. ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಆಗಮಿಸಿದ್ದರು. ಆದರೆ ಸ್ಥಳೀಯ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಪೂರ್ವಕವಾಗಿ ದೂರವಿಟ್ಟು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಅವರ ಕಾರಿಗೆ ಜೆಡಿಎಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕಾರಿನ ಮೇಲೆ ಕಲ್ಲು ತೂರಾಟ ಮಾಡಿ ಮೊಟ್ಟೆ ಎಸೆದು ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಅಡ್ಡಿಮಾಡಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ ಹಲವಾರು ಜೆಡಿಎಸ್‌ಗೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ನಂತರ ಪೋಲಿಸ್ ಭದ್ರತೆಯಲ್ಲಿ ಯೋಗೇಶ್ವರ್ ಗುದ್ದಲಿ ಪೂಜೆ ನೆರವೇರಿಸಬೇಕಾಯಿತು.
ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿತ್ತು. ಉಭಯ ನಾಯಕರೂ ವಿಶೇಷ ಅನುದಾನಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಇಂದು, ಶನಿವಾರ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆದಿದೆ. ಆದರೆ ಆಹ್ವಾನ ಪತ್ರಿಕೆಯಲ್ಲಿ ಸಿ.ಪಿ. ಯೋಗೇಶ್ವರ ಅವರ ಕೋರಿಕೆ ಮೇರೆಗೆ ಬಿಡುಗಡೆ ಆಗಿರುವ ವಿಶೇಷ ಅನುದಾನ ಎಂದು ಮಾತ್ರ ಮುದ್ರಣವಾಗಿದ್ದು ಜೆಡಿಎಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆಂದು ಕಿಡಿಕಾರಿದ್ದರು ಹಾಗೂ ಪ್ರತಿಭಟನೆಗೆ ಜೆಡಿಎಸ್ ಕಾರ್ಯಕರ್ತರು ಕರೆ ನೀಡಿದ್ದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement