ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಸಂಘಟಿಸಲು ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಎರಡು ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಸೋನಿಯಾ ಗಾಂಧಿ ಅವರು ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಕ್ಟೋಬರ್ 6ರಂದು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುಲಿದ್ದು, ಸಾಂಕೇತಿಕವಾಗಿ ಕೆಲ ಕಾಲ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅವರು 4, 5ರಂದು ಕೊಡಗು ಭಾಗದ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಮಾಡಲಿದ್ದಾರೆ. ದಸರಾ ಹಬ್ಬ ಹಿನ್ನೆಲೆಯಲ್ಲಿ ಯಾತ್ರೆಗೆ ಎರಡು ದಿನ ಯಾತ್ರೆಗೆ ಬಿಡುವು ಇರುವುದರಿಂದ ಅಕ್ಟೋಬರ್ 4, 5ರಂದು ರೆಸಾರ್ಟ್ನಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕರ್ನಾಟಕದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ