ರಾಜ್ಯದಲ್ಲಿ ಅಕ್ಟೋಬರ್‌ 15ರ ವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯಗೊಂಡಿದ್ದರೂ ಅಕ್ಟೋಬರ್‌  15ರ ವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ 10ರ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ.
ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. IMD ಅಧಿಕಾರಿಗಳ ಪ್ರಕಾರ, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಇದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯೂ ಇದೆ, ಇದರಿಂದಾಗಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 1ರಿಂದ ಸೆಪ್ಟೆಂಬರ್‌ 30ರ ವರೆಗೆ ಇದ್ದ ನೈಋತ್ಯ ಮುಂಗಾರಿನಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಶೇ.20ಕ್ಕಿಂತ ಅಧಿಕ ಮಳೆಯಾಗಿದೆ. ರಾಜ್ಯದ ವಾಡಿಕೆ ಪ್ರಮಾಣ 85.2 ಸೆ.ಮೀ, ಈ ಬಾರಿ 100.19 ಸೆ.ಮಿ ಮಳೆಯಾಗಿದೆ ದಕ್ಷಿಣ ಒಳನಾಡಿನ ವಾಡಿಕೆ 67.84ಸೆ.ಮೀ ಈ ಬಾರಿ 101.2 ಸೆ.ಮೀ. ಮಳೆಯಾಗಿದ್ದು ಶೇ.49 ರಷ್ಟು ಮಳೆ ಹೆಚ್ಚಳವಾಗಿದೆ.
ಉತ್ತರ ಒಳನಾಡಿನಲ್ಲಿ ವಾಡಿಕೆ 48.08 ಸೆಂ.ಮೀ ಇದ್ದು, ಈ ಬಾರಿ 65.11 ಸೆಂ.ಮೀ ಮಳೆಯಾಗಿದ್ದು, ಶೇ.34 ರಷ್ಟು ಮಳೆ ಹೆಚ್ಚಳವಾಗಿದೆ. ಕರಾವಳಿಯಲ್ಲಿ ವಾಡಿಕೆ 307.55 ಸೆಂ.ಮೀ, ಈ ಬಾರಿ 323.28 ಸೆಂ.ಮೀ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement