ನಾಳೆ ಮೈಸೂರಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ..?

ಬೆಂಗಳೂರು: ಇಂದು, ಭಾನುವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ನಾಳೆ, ಸೋಮವಾರ ಮೈಸೂರು ನಗರದಿಂದ ಸಾಗಲಿರುವ  ಭಾರತ ಜೋಡೋ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದೆ.

ಅಕ್ಟೋಬರ್‌ 6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ ಎನ್ನಲಾಗಿದೆ. ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎನ್ನಲಾಗಿದೆ. ಆದರೆ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ, ಇಂದು ಸಂಜೆ ಈ ಬಗ್ಗೆ ಸ್ಪಷ್ಟತೆ ಸಿಗಬಹುದು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement