ಬೆಳಗಾವಿ ಸುವರ್ಣಸೌಧದ ಎದುರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ನಡೆದ ಸಮಾರಂಭದಲ್ಲಿ ‘ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಾವರು ಮಾತನಾಡಿದರು.
ಕಿತ್ತೂರು ಉತ್ಸವ ಪ್ರಾರಂಭವಾಗಿ 25ರಿಂದ 30 ವರ್ಷ ಆಗಿದೆ. ಮಧ್ಯೆ ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ ಎಂದರು.

ಸ್ವಾತಂತ್ರ್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್ ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ಆರ್ಚೈವ್ಸ್ ದಾಖಲೆಗಳಿಗೂ ಸಹ ಕಳಿಸಿಕೊಟ್ಟು ನೋಂದಣಿ ಮಾಡಿಸುತ್ತೇವೆ ಎಂದರು.
ಕಿತ್ತೂರಿನಲ್ಲಿ ಶಿಥಿಲಗೊಡಿರುವ ಈಗಿರುವ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮ ಕೈಗೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸುವ ಚಿಂತನೆ ಸರ್ಕಾರಕ್ಕಿದೆ ಎಂದರು.
ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಬೆಂಗಳೂರಿನಿಂದ ಭಾನುವಾರ ಪ್ರಾರಂಭವಾದ ವಿಜಯ ಜ್ಯೋತಿ ಯಾತ್ರೆ ಅಕ್ಟೋಬರ್ 23ರಂದು ಕಿತ್ತೂರು ತಲುಪಲಿದೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆ ಉಸ್ತುವಾರಿ ಗೋವಿಂದ ಕಾರಜೋಳ, ಸಚಿವ ಎಂಟಿಬಿ ನಾಗರಾಜ, ಸಾಹಿತಿ ಲೀಲಾದೇವಿ ಆರ್ ಪ್ರಸಾದ್ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement