ಹೊನ್ನಾವರ ಪರಮೇಶ ಮೇಸ್ತ ಪ್ರಕರಣ: ಹತ್ಯೆಯಲ್ಲ, ಆಕಸ್ಮಿಕ ಸಾವು ; ಸಿಬಿಐ ವರದಿ ಸಲ್ಲಿಕೆ

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಮೇಶ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ  ಸಲ್ಲಿಸಿದ್ದಾರೆ.
ವರದಿಯಲ್ಲಿ ಪರೇಶ್ ಮೇಸ್ತ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ ಸಾವು ಸಂಭವಿಸಿದೆ ಎಂದು ಉಲ್ಲೇಖಿಸಲಾಗಿದೆ.  ಸಿಬಿಐ ಸುಮಾರು 1500 ಪುಟಗಳ ವರದಿ ಸಲ್ಲಿಸಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16ಕ್ಕೆ ವಿಚಾರಣೆ ಮುಂದೂಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಡಿಸೆಂಬರ್ 6 2017 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರಮೇಶ ಮೇಸ್ತ ಕಾಣೆಯಾಗಿದ್ದ. ಮುಂದೆ ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವ ಪತ್ತೆಯಾಗಿದ್ದ. ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಯವರು ಆರೋಪಿಸಿದ್ದರು. ಕರಾವಳಿಯಲ್ಲಿ ಇದರ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದವು.

ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂಪರ ಸಂಘಟನೆಗಳು ಬಂದ್ ಕರೆ ನೀಡಿದವು. ಕೆಲವೆಡೆ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿತ್ತು. ಕುಮಟಾದಲ್ಲಿ ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಹಲವೆಡೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿತ್ತು. ವಾಹನಗಳು ಜಖಂಗೊಂಡಿದ್ದವು.
ಬಿಜೆಪಿ ಅಂದಿನ ಕಾಂಗ್ರೆಸ್​ ಸರ್ಕಾರದ ವಿರುದ್ಧ ದೊಡ್ಡ ಪ್ರತಿಭಟನೆ ನಡೆಸಿತು. ಪರೇಶ್ ಮೇಸ್ತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿತು. ಅಂದಿನ ಕಾಂಗ್ರೆಸ್‌ ಸರ್ಕಾರ ಪ್ರತಿಪಕ್ಷಗಳ ಹೋರಾಟಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಯಿತು. ಪ್ರಕರಣದಲ್ಲಿ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷ ತನಿಖೆ ನಡೆಸಿದ ಸಿಬಿಐ ತನಿಖಾ ವರದಿಯನ್ನು ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ, ನವೆಂಬರ್ 16ಕ್ಕೆ ವಿಚಾರಣೆ ಮುಂದೂಡಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಾಂತಾರ: ಹೊಂಬಾಳೆ ಫಿಲ್ಮ್ಸ್‌ ವಿರುದ್ಧದ ಎರಡನೇ ಮೊಕದ್ದಮೆ ಹಿಂದಿರುಗಿಸಿದ ಕೇರಳ ಕೋರ್ಟ್; ಈಗ "ವರಾಹರೂಪಂ" ಹಾಡಿನ ಬಳಕೆ ವಿರುದ್ಧ ಯಾವುದೇ ಆದೇಶವಿಲ್ಲ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 5

ನಿಮ್ಮ ಕಾಮೆಂಟ್ ಬರೆಯಿರಿ

advertisement