ಡಿಜಿಪಿ ಕೇಸ್‌ ಹಿಂಪಡೆಯದಂತೆ ವರದಿ ನೀಡಿದ್ದರೂ ಪಿಎಫ್‌ಐ ಮೇಲಿನ ಎಲ್ಲ ಪ್ರಕರಣ ಹಿಂಪಡೆದಿದ್ದ ಸಿದ್ದರಾಮಯ್ಯ : ಸಚಿವ ಅಶೋಕ ಆರೋಪ

ಬೆಂಗಳೂರು: ಪೇ ಸಿಎಂ ಪೋಸ್ಟರ್​ ಅಂಟಿಸಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್​ಗೆ ಸಚಿವ ಆರ್. ಅಶೋಕ್ ಸಿದ್ದರಾಮಯ್ಯ ಬಗ್ಗೆ ಪೋಸ್ಟರ್​ ರಿಲೀಸ್​ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ​
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಭಾಗ್ಯಗಳು ನಮ್ಮದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕಾಗಿ ಪಿಎಫ್‌ಐ (PFI )ಭಾಗ್ಯ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಪಿಎಫ್ಐ ನಿಷೇಧ ಮಾಡಿದ್ದರಿಂದ ಕಾಂಗ್ರೆಸ್ ಸೂತಕದ ಮನೆಯಾಗಿದೆ. ಸಿದ್ದರಾಮಯ್ಯ ನವರು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ 1,600 ಪ್ರಕರಣ ಹಿಂಪಡೆದಿದ್ದಾರೆ
ಪಿಎಫ್‌ಐ ಹಾಗೂ ಕೆಎಫ್​ಡಿ ವಿರುದ್ಧ 1,600 ಪ್ರಕರಣಗಳು ದಾಖಲಾಗಿತ್ತು. ಪೊಲೀಸರ ಮೇಲೆ, ಜನರ ಮೇಲೆ ಹಲ್ಲೆ ಎಂದು ಕೇಸ್ ದಾಖಲು ಮಾಡಲಾಗಿದೆ. ಅಂದಿನ ಡಿಜಿಪಿ ಕೇಸ್​ ಹಿಂಪಡೆಯದಂತೆ ವರದಿ ನೀಡಿದ್ದರೂ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಎಲ್ಲ 1,600 ಪ್ರಕರಣ ಹಿಂಪಡೆದಿದ್ದಾರೆ ಎಂದು ಆರೋಪಿಸಿದರು.
ಭಾರತ್ ಜೋಡೋ ಸಾಗುವ ಮಾರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಈ ಪೋಸ್ಟರ್ ಅಂಟಿಸಿದ್ದಾರೆ ಎಂದು ಆರ್​. ಅಶೋಕ್​ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಕೊಡಗು, ಮೈಸೂರು, ಮಂಗಳೂರಿನಲ್ಲಿ ಪಿಎಫ್‌ಐನವರಿಗೆ ತರಬೇತಿ ನೀಡಲಾಗಿದೆ. ಬೈಕ್‌ನಲ್ಲಿ ಹೋಗುವಾಗ ಹೇಗೆ ಕತ್ತು ಕಡಿಯಬೇಕು, ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಹೇಗೆ ಮಾಡಬೇಕು ಎಂದೂ ತರಬೇತಿ ನೀಡಲಾಗಿದೆ. ಹೀಗಿರುವಾಗ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ಹಿಂಡೆದ ಸಿದ್ದರಾಮಯ್ಯ ಈಗ ನಿಷೇಧಿಸಲು ನಾವೇ ಹೇಳಿದ್ದು ಎಂದು ಹೇಳಿಕೊಳುತ್ತಾರೆ. ಅವರಿಗೆ ನಾಚಿಕೆಯಾಗಬೇಕು. ಮತ್ತು ತಮ್ಮ ಹೇಳಿಕೆಗೆ ಅವರು ಕ್ಷಮೆ ಕೇಳಬೇಕು ಎಂದು ಸಚಿವ ಅಶೋಕ ಒತ್ತಾಯಿಸಿದರು.

 

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement