ತಂದೆ ಸಾಲ ತೀರಿಸದ್ದಕ್ಕೆ ಅಪ್ರಾಪ್ತ ಮಗನಿಂದ ಬೆತ್ತಲೆ ಪೂಜೆ ಮಾಡಿಸಿದ ದುಷ್ಕರ್ಮಿಗಳು

ಕೊಪ್ಪಳ: ತಂದೆಯ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ 15 ವರ್ಷದ ಬಾಲಕನೊಬ್ಬನಿಗೆ ‘ಬೆತ್ತಲು ಪೂಜೆʼ ಮಾಡಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಕೊಪ್ಪಳ ತಾಲೂಕಿನ ಹಾಸಗಲ್‌  ಗ್ರಾಮದಲ್ಲಿ ಈ ವರ್ಷದ ಜೂನ್‌ನಲ್ಲಿ ಈ ಭಯಾನಕ ಆಚರಣೆ ನಡೆದಿದೆ. ಆದರೆ, ಇತ್ತೀಚೆಗಷ್ಟೇ ಈ ಘಟನೆಯ ವೀಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.
ಅಕ್ಟೋಬರ್ 2ರಂದು ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮನೆಯವರು ಎಫ್‌ಐಆರ್ ದಾಖಲಿಸಿದ್ದು, ಪ್ರಕರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯೇ ಈ ಘಟನೆಯ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ನಿವಾಸಿ 16 ವರ್ಷದ ಬಾಲಕನಿಗೆ ಆರೋಪಿಗಳು ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ.

ಆರೋಪಿಗಳು ಬಾಲಕನ ತಂದೆಗೆ ಮನೆ ನಿರ್ಮಿಸಲು ಸಾಲ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಬಾಲಕನ ತಂದೆಗೆ ಸಕಾಲಕ್ಕೆ ಸಾಲದ ಮೊತ್ತವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಪ್ರತಿಯಾಗಿ ಹುಬ್ಬಳ್ಳಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ ಬಾಲಕನಿಗೆ ನೀನು ಬೆತ್ತಲೆ ಪೂಜೆ ಮಾಡಿದರೆ ನಿನಗೆ ಹಣ ಸಿಗುತ್ತದೆ. ಇದರಿಂದ ತಂದೆಯನ್ನು ಸಾಲದಿಂದ ಮುಕ್ತಗೊಳಿಸಲು ಸಹಾಯ ಮಾಡುತ್ತದೆ ಎಂದು ಆರೋಪಿಗಳು ನಂಬಿಸಿದ ಆರೋಪಿಗಳು ಬಾಲಕನಿಂದ ಬೆತ್ತಲೆ ಪೂಜೆ ಮಾಡಿಸಿದ್ದಾರೆ.
ಬಾಲಕನ ಹೇಳಿಕೆಯ ಪ್ರಕಾರ, ಆರೋಪಿಗಳ ಜೊತೆಗೆ ಹುಬ್ಬಳ್ಳಿಯ ಆತ ತಿಮ್ಮಸಾಗರ ಗ್ರಾಮದ ಜಲ ಜೀವನ್ ಮಿಷನ್‌ನಲ್ಲಿ ಪೈಪ್‌ಲೈನ್ ಹಾಕುವ ಕಾಮಗಾರಿಗಾಗಿ ಹುಬ್ಬಳ್ಳಿಗೆ ಬಂದಿದ್ದರು. ಆ ಸಮಯದಲ್ಲಿ, ಆರೋಪಿಗಳು ಅವನನ್ನು ಬೆತ್ತಲೆ ಪೂಜೆಗೆ ಒಳಗಾಗುವಂತೆ ಮನವೊಲಿಸಿದರು. ನಂತರ ಆ ಹುಡುಗ ಮಂಗಳೂರಿಗೆ ಖಾಸಗಿ ಕಟ್ಟಡದಲ್ಲಿ ಕೆಲಸ ಮಾಡಲು ಹೋಗಿದ್ದಾನೆ.
ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹೆತ್ತವರು ಕಂಗಾಲಾಗಿದ್ದಾರೆ. ನಂತರ ಮನೆಯವರು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವವರ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement