ಮೈಸೂರು ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ

ಮೈಸೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಾಮುಂಡಿ ಬೆಟ್ಟಕ್ಕೆ ಸೋಮವಾರ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಭಾರತ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಅವರು, ಶ್ರೀರಂಗಪಟ್ಟಣದಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು. ಅವರ ಜೊತೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಇದ್ದರು.
ತಾಯಿ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಬರಮಾಡಿಕೊಳ್ಳಲಿರುವ ರಾಹುಲ್, ಬಳಿಕ ಶ್ರೀರಂಗಪಟ್ಟಣಕ್ಕೆ ವಾಹನದಲ್ಲಿ ತೆರಳಿ ಅಲ್ಲಿಂದ ಪಾದಯಾತ್ರೆ ಮುಂದುವರಿಸಲಿದ್ದಾರೆ. ಸೋನಿಯಾ ಗಾಂಧಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ನಂತರ ಕೊಡಗಿನ ರೆಸಾರ್ಟಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ನಿಮ್ಮ ಕಾಮೆಂಟ್ ಬರೆಯಿರಿ

advertisement