ಬೆಂಗಳೂರು: ಕೆ.ಚಂದ್ರಶೇಖರ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೈದರಾಬಾದ್ಗೆ ತೆರಳಿದ್ದಾರೆ.
ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಕೆಸಿಆರ್ ಚರ್ಚೆ ನಡೆಸಿದ್ದರು. ಕೆಲ ತಿಂಗಳ ಹಿಂದೆಯಷ್ಟೇ ಹೈದರಾಬಾದ್ಗೆ ತೆರಳಿ ಕೆಸಿಆರ್ ಜೊತೆ ಹೆಚ್ಡಿಕೆ ಚರ್ಚೆ ನಡೆಸಿದ್ದರು. ಬುಧವಾರ ಹೈದ್ರಾಬಾದ್ನಲ್ಲೇ ಶಾಸಕರ ಜೊತೆ ಹೆಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದು, ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ