ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖಗೆ ಜಾಮೀನು

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅಕ್ಟೋಬರ್ 13 ರಂದು ಜಾರಿಗೆ ಬರಲಿದೆ ಎಂದು ಹೈಕೋರ್ಟ್ ಹೇಳಿದೆ. ದೇಶಮುಖ ಅವರಿಗೆ 1 ಲಕ್ಷ ರೂಪಾಯಿಗಳನ್ನು ಶ್ಯೂರಿಟಿಯಾಗಿ ಠೇವಣಿ ಇಡುವಂತೆ ಮತ್ತು ಕರೆಸಿದಾಗ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಹಾಜರಾಗುವಂತೆ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದೇಶಮುಖ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯವು ಈ ವರ್ಷದ ಆರಂಭದಲ್ಲಿ ತಿರಸ್ಕರಿಸಿತ್ತು.

ಮಹಾರಾಷ್ಟ್ರದ ಗೃಹ ಸಚಿವರಾಗಿ ಅವರು ತಮ್ಮ ಅಧಿಕಾರವನ್ನು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ದೇಶಮುಖ ವಿರುದ್ಧದ ಆರೋಪ. 4.7 ಕೋಟಿ ಅಕ್ರಮ ಸಲ್ಲಿಕೆಯ ಪ್ರಕರಣವನ್ನು ಇ.ಡಿ. ದಾಖಲಿಸಿದ್ದು, ಮುಂಬೈನಲ್ಲಿ ಉದ್ಯಮಿಗಳಿಂದ ಸುಲಿಗೆ ಮಾಡುತ್ತಿರುವ ಹಣದ ಸರಮಾಲೆಯನ್ನು ತೋರಿಸಿದೆ. ಇ.ಡಿ. ಪ್ರಕಾರ, ಹವಾಲಾ ಮಾರ್ಗದ ಮೂಲಕ ಹಣವನ್ನು ದೇಶಮುಖ ಅವರ ಟ್ರಸ್ಟ್‌ಗೆ ತಿರುಗಿಸಲಾಗಿದೆ.
ಈ ಪ್ರಕರಣವನ್ನು ಮೊದಲು ಸಿಬಿಐ ದಾಖಲಿಸಿಕೊಂಡಿತ್ತು ಮತ್ತು ನಂತರ ಇ.ಡಿ. ಅಕ್ರಮ ಹಣ ವರ್ಗಾವಣೆ ಕೋನದ ಮೇಲೆ ತನಿಖೆ ನಡೆಸಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement