ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ಬೆಂಗಳೂರು: ಕೆ.ಚಂದ್ರಶೇಖರ ರಾವ್‌ ಭಾರತ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೈದರಾಬಾದ್​ಗೆ ತೆರಳಿದ್ದಾರೆ.
ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಕೆಸಿಆರ್ ಚರ್ಚೆ ನಡೆಸಿದ್ದರು. ಕೆಲ ತಿಂಗಳ ಹಿಂದೆಯಷ್ಟೇ ಹೈದರಾಬಾದ್​ಗೆ ತೆರಳಿ ಕೆಸಿಆರ್ ಜೊತೆ ಹೆಚ್​ಡಿಕೆ ಚರ್ಚೆ ನಡೆಸಿದ್ದರು. ಬುಧವಾರ ಹೈದ್ರಾಬಾದ್​ನಲ್ಲೇ ಶಾಸಕರ ಜೊತೆ ಹೆಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದು, ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement