ರೈಲ್ವೆ ಇಲಾಖೆಯು ಉದ್ಯೋಗ ಅವಕಾಶ: 3115 ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆ (Eastern Railway) ಅಡಿಯಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 3115 ಒಟ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ ಸೆಪ್ಟೆಂಬರ್‌ 30, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2022
ಹೌರಾ ವಿಭಾಗ-659 ಹುದ್ದೆಗಳು
ಲಿಲುವಾ ಕಾರ್ಯಾಗಾರ-612 ಹುದ್ದೆಗಳು
ಸೀಲ್ದಾ ವಿಭಾಗ-440 ಹುದ್ದೆಗಳು
ಕಂಚ್ರಪಾರಾ ಕಾರ್ಯಾಗಾರ-187 ಹುದ್ದೆಗಳು
ಮಾಲ್ಡಾ ವಿಭಾಗ -138 ಹುದ್ದೆಗಳು
ಅಸನ್ಸೋಲ್ ಕಾರ್ಯಾಗಾರ-412 ಹುದ್ದೆಗಳು
ಜಮಾಲ್ಪುರ್ ಕಾರ್ಯಾಗಾರ-667 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ-667 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ- 3115

ಅರ್ಹತೆ: ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. NCVT/SCVT ಹೊರಡಿಸಿದ ಅಧಿಸೂಚನೆಯಂತೆ ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ: ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಐಟಿಐನಲ್ಲಿನ ವಿದ್ಯಾರ್ಹತೆ ಮತ್ತು ಸರಾಸರಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಮಾಡಲಾಗುತ್ತದೆ. ಆ ಬಳಿಕ ಆಯ್ಕೆ ನಡೆಯಲಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಬಹುದು-Indian-Railway-Recruitment-2022-Notification-PDF

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement