ಪಿಎಸ್‌ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡದ ಆರೋಪ ; ನ್ಯಾಯಾಂಗ ತನಿಖೆಗೆ ದಿನೇಶ​ ಗುಂಡೂರಾವ್ ಆಗ್ರಹ

ಬೆಂಗಳೂರು: ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಹರೆಕೆಯ ಕುರಿ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದಿನೇಶ ಗುಂಡೂರಾವ್, ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಅವರು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ (CBI) ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಳೆದ ಅಧಿವೇಶನದಲ್ಲಿ ಪಿಎಸ್‍ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿ ಪುತ್ರ ಎಂದು ಹೇಳಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಪಿಎಸ್‍ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ರಾಜ್ಯದ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ಗುಂಡೂರಾವ್​ ಒತ್ತಾಯಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement