ಅಡಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತ ಔಷಧಿ ವಿತರಣೆ

ಬೆಂಗಳೂರು : ಅಡಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಹಾನಿಗೊಳಗಾದ ಅಡಿಕೆ ತೋಟಗಳಿಗೆ ಔಷಧಗಳ ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಗಳನ್ನು ವಿತರಿಸಲು ತೀರ್ಮಾನಿಸಿದೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಕೊಲೆಟೋಟ್ರಿಕಮ್ ಗ್ಲೋಯೋಸ್ಪೊರಿಯಿಡ್ಡ್ ಎಂಬ ಶಿಲೀಂಧ್ರದಿಂದ ಎಲೆ ಚುಕ್ಕಿ ರೋಗವು ಾಡಕೆ ಮರಕ್ಕೆ ಕಾಣಿಸಿಕೊಂಡಿದೆ.

ಇದು ಗಾಳಿಯಲ್ಲಿ ತೀವ್ರವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಹಾನಿಗೊಳಗಾದ ಅಡಿಕೆ ತೋಟಗಳ ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರ್ಕಾರ 8 ಕೋಟಿ ರೂ.ಗಳಷ್ಟು ಅನುದಾನ ನಿಗದಿ ಮಾಡಿದೆ. ಅದರಲ್ಲಿ ನಾಲ್ಕು ಕೋಟಿ ರೂಪಾಯಿ ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು 20 ಸಾವಿರ ಹೆಕ್ಟೇರ್ ಅಡಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದೆ ಎಂದು ಅಂದಾಜಿಸಲಾಗಿದೆ. ಎಲೆ ಚುಕ್ಕೆ ಬಾಧೆ ಕುರಿತು, ಕಳೆದ ವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ತೋಟಗಾರಿಕಾ ಸಚಿವ ಮುನಿರತ್ನ, ಮೀನುಗಾರಿಕೆ ಸಚಿವ ಅಂಗಾರ ಅವರೊಂದಿಗೆ, ಸಭೆ ನಡೆಸಿ, ರೋಗ ನಿಯಂತ್ರಣದ ಅಗತ್ಯದ ಬಗ್ಗೆ ಚರ್ಚಿಸಿದ್ದರು.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement