ಕಾಂಗ್ರೆಸ್‌ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ​ ಅವರಿಗೆ ಕಳುಹಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರವಾಗಿ ಪ್ರಚಾರ ಮಾಡಲು ಸುದರ್ಶನ ತಮ್ಮ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿ ಹೊತ್ತಿರುವ ಪಕ್ಷದ ನಾಯಕರು ಅಭ್ಯರ್ಥಿಗಳ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆಪ್ರಚಾರ ಮಾಡಬೇಕು ಎಂದಿದ್ದರೆ, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಪ್ರಚಾರದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ನಾನು ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಈಗಾಗಲೇ ನಾಮಪ ಪತ್ರ ಸಲ್ಲಿಸಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು ಅಕ್ಟೋಬರ್‌ 8ರವರೆಗೆ ಅವಕಾಶ ಇದೆ. ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಅಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುತ್ತದೆ. ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದರೆ ಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement