ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಬುಧವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ್‌ನ ದ್ರಾಚ್ ಪ್ರದೇಶದಲ್ಲಿ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರರನ್ನು ಹತ್ಯೆ ಮಾಡಲಾಗಿದ್ದು, ದಕ್ಷಿಣ ಕಾಶ್ಮೀರ ಜಿಲ್ಲೆಯ ಮೂಲು ಪ್ರದೇಶದಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಮೂವರು ಸ್ಥಳೀಯ ಭಯೋತ್ಪಾದಕರು ಶೋಪಿಯಾನ್‌ನ ದ್ರಾಚ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟರು” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಮೂಲುನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಂಘಟನೆ ಎಲ್‌ಇಟಿಯ ಸ್ಥಳೀಯ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅವರು ಹೇಳಿದರು.
ಡ್ರಾಚ್ ಕಾರ್ಯಾಚರಣೆಯಲ್ಲಿ, ಹತ್ಯೆಯಾದ ಮೂವರಲ್ಲಿ ಇಬ್ಬರನ್ನು ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂದು ಗುರುತಿಸಲಾಗಿದೆ ಎಂದು avru ಹೇಳಿದರು.
ಅಕ್ಟೋಬರ್ 2 ರಂದು ಪುಲ್ವಾಮಾದ ಪಿಂಗ್ಲಾನಾದಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಜಾವೇದ್ ದಾರ್ ಮತ್ತು ಸೆಪ್ಟೆಂಬರ್ 24 ರಂದು ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಕಾರ್ಮಿಕನ ಹತ್ಯೆಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement