ಕಾರವಾರ : ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ಸೌಲಭ್ಯ ಕಲ್ಪಿಸುವುದು, 450 ಬೆಡ್ಗಳ ಆಸ್ಪತ್ರೆಗೆ ಶಿಲಾನ್ಯಾಸ ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಅಕ್ಟೋಬರ್ 11ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಸಚಿವರು ಅಂದು ಕಾರವಾರದ ಮೆಡಿಕಲ್ ಕಾಲೇಜಿಗೆ ಆಗಮಿಸಿ 160 ಕೋಟಿ ರೂ.ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಲ್ಲದೆ, ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಬಗ್ಗೆ ವಿಚಾರ ವಿನಿಮಯ ಸಭೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆಯನ್ನೂ ಅಂದು ಸಚಿವರು ನಡೆಸಲಿದ್ದಾರೆ ಎಂದು ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ