ಆನೆ ಮರಿ ಗಾಯದ ಬಗ್ಗೆ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ; ಅದಕ್ಕೆ ಸ್ಪಂದಿಸುತ್ತೇವೆ, ಚಿಕಿತ್ಸೆ ಕೊಡಿಸ್ತೀವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ನಾಗರಹೊಳೆ ಅರಣ್ಯದಲ್ಲಿ ಆನೆಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಬಗ್ಗೆ ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು,  ಪರಿಶೀಲಿಸಿ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಅವರು, ಆನೆ ಹಾಗೂ ಅದರ ಮರಿಯನ್ನು ನೋಡಿದ್ದಾರೆ. ಆ ವೇಳೆ ಅವರು ಆನೆ ಮರಿಗೆ ಸೊಂಡಿಲು ಹಾಗೂ ಬಾಲಕ್ಕೆ ಗಾಯವಾಗಿರುವುದನ್ನು ಗಮನಿಸಿದ್ದಾರೆ. ಅದನ್ನು ಪತ್ರದ ಮೂಲಕ ನನ್ನ ಗಮನಕ್ಕೆ ತಂದು ಅದಕ್ಕೆ ಸೂಕ್ತ ಚಿಕಿತ್ಸೆಗೆ ಮನವಿ ಮಾಡಿದ್ದಾರೆ.

ಇದರಲ್ಲಿ ಮಾನವೀಯ ಕಳಕಳಿ ಇರುವುದರಿಂದ ಈ ಬಗ್ಗೆ ಮಾಹಿತಿ ಪಡೆದ ನಂತರ ಹಿರಿಯ ಅಧಿಕಾರಿಗಳ ಬಳಿ ಮಾತನಾಡುತ್ತೇನೆ ಹಾಗೂ ಗಾಯಗೊಂಡ ಆನೆ ಮರಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು ಎಂದು ಪರಿಶೀಲನೆ ಮಾಡಿ ರಾಹುಲ್‌ ಗಾಂಧಿ ಗಮನಕ್ಕೆ ತಂದಿರುವ ವಿಷಯದ ಬಗ್ಗೆ ಸ್ಪಂದಿಸಲಾಗುವುದು ಹಾಗೂ ಮಾನವೀಯ ದೃಷ್ಟಿಯಿಂದ ಅದರ ಅಗತ್ಯವೂ ಇದೆ ಎಂದು ಬೊಮ್ಮಾಯಿ ಹೇಳಿದರು.
ಭಾರತ್ ಜೋಡೋ ಅಭಿಯಾನದಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸಹಜವಾಗಿ ಎಲ್ಲಾ ಪಕ್ಷದ ಮುಖ್ಯಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ ಅರ್ಧ ಕಿಮೀನಷ್ಟು ಭಾರತ ಜೋಡೋ ಯಾತ್ರೆಯಲ್ಲಿ ನಡೆದಿದ್ದಾರೆ. ಅವರು ಅವರ ಪಕ್ಷಕ್ಕಾಗಿ ಮಾಡುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement