ಕಾಂಗ್ರೆಸ್‌ನ ಭಾರತ್‌ ಜೋಡೋಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಕಾರ್ಯಕ್ರಮ; ಎರಡು ತಂಡಗಳಲ್ಲಿ ರಾಜ್ಯ ಪ್ರವಾಸ, ಏಳು ಕಡೆಗಳಲ್ಲಿ 7 ಬೃಹತ್ ಸಮಾವೇಶ

ಬೆಂಗಳೂರು: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸಂಬಂಧ ರಾಹುಲ್‌ ಗಾಂಧಿ ಅವರು, 21 ದಿನಗಳ ಕಾಲ ರಾಜ್ಯದಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯ ನಾಯಕರು ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ಪ್ರವಾಸ ಮಾಡಲಿದ್ದಾರೆ. ವಿವಿಧೆಡೆ ಒಟ್ಟು 7 ಸಮಾವೇಶಗಳನ್ನು ಸಹ ಆಯೋಜನೆ ಮಾಡಲಾಗಿದ್ದು, ರಾಜ್ಯ ನಾಯಕರು ಎರಡು ತಂಡಗಳಲ್ಲಿ ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಕಾಂಗ್ರೆಸ್‌ಗಿಂತ ಒಂದು ತಿಂಗಳ ಹಿಂದೆಯೇ ನಾವು ಈ ಕಾರ್ಯಕ್ರಮಗಳಿಗೆ ಯೋಜನೆ ರೂಪಿಸಿದ್ದೆವು. ಆದರೆ ಅಧಿವೇಶನ, ದಸರಾ ಹಬ್ಬ ಬಂದ ಕಾರಣ ಅದನ್ನು ಮುಗಿಸಿ ಪ್ರವಾಸ ಹಾಗೂ ಸಮಾವೇಶ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಎರಡು ತಂಡಗಳಲ್ಲಿ ಅಕ್ಟೋಬರ್ 11ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ ಆರಂಭಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಒಂದು ತಂಡ 90 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದೆ. ಈ ನಾಯಕರು ವಾರಕ್ಕೆ ಮೂರು ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆ. ಆ ವೇಳೆ ಮಠಗಳಿಗೆ ಭೇಟಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ, ವಿವಿಧ ಕಾರ್ಯಕ್ರಮಗಳು ಸಹ ನಡೆಯಲಿವೆ. ಎರಡನೇ ತಂಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರವಾಸ ಅವರ ನೇತೃತವದಲ್ಲಿ ತಂಡ ಪ್ರವಾಸ ಮಾಡಲಿದ್ದಾರೆ. ಈ ತಂಡ 50 ಕ್ಷೇತ್ರಗಳಲ್ಲಿ ಪ್ರವಾಸ ನಡೆಸಲಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ರಾಜ್ಯದ ಏಳು ಕಡೆ 7 ಬೃಹತ್ ಸಮಾವೇಶಗಳು
ಬಿಜೆಪಿ ರಾಜ್ಯದ ಏಳು ಕಡೆಗಳಲ್ಲಿ  7 ಬೃಹತ್ ಸಮಾವೇಶಗಳನ್ನು ಆಯೋಜಿಸಲಿದೆ. ಮೈಸೂರಿನಲ್ಲಿ ಪರಿಶಿಷ್ಟ ಜಾತಿ ಸಮಾವೇಶ, ಕಲಬುರ್ಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶ, ಹುಬ್ಬಳ್ಳಿಯಲ್ಲಿ ರೈತ ಸಮಾವೇಶ, ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶ, ಮಂಗಳೂರಿನಲ್ಲಿ ಯುವ ಸಮಾವೇಶ ಹಾಗೂ ಬೆಂಗಳೂರಿನಲ್ಲಿ ಮಹಿಳಾ ಸಮಾವೇಶ ನಡೆಸಲಾಗುತ್ತದೆ. ಈ ಸಮಾವೇಶಗಳಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರಾದ ಜೆ. ಪಿ. ನಡ್ಡಾ, ಅಮಿತ್ ಶಾ ಮೊದಲಾದ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ದಿನಾಂಕಗಳನ್ನು ಅಂತಿಮಗೊಳಿಸಬೇಕಿದೆ.

 

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement