ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಹುಬ್ಬಳ್ಳಿ:  ಸರಳ ವಾಸ್ತು ಖ್ಯಾತಿಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇಲ್ಲಿನ  ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸುಮಾರು 800ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಎಸಿಪಿ ವಿನೋದ್‌ ಮುಕ್ತೇದಾರ ಆರೋಪ ಪಟ್ಟಿ ಸಲ್ಲಿಸಿದ್ದು, ಕೊಲೆಗೆ ಕಾರಣವಾದ ಚಂದ್ರಶೇಖರ ಗುರೂಜಿ ಮತ್ತು ಆರೋಪಿಗಳಿಬ್ಬರ ನಡುವಿನ ಆಸ್ತಿ ವಿವಾದ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದ ವಿವರಗಳನ್ನು ಒಳಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರಶೇಖರ್‌ ಗುರೂಜಿ ಹತ್ಯೆಗೆ ಸಂಬಂಧಿಸಿ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹೋಟೇಲ್‌ನಲ್ಲಿ ಕೊಲೆ ಮಾಡಿದ ಘಟನೆ ನಡೆದು 4 ತಾಸಿನೊಳಗೆ ಪೊಲೀಸರು ರಾಮದುರ್ಗ ಬಳಿ ಹಂತಕರನ್ನು ವಶಕ್ಕೆ ಪಡೆದಿದ್ದರು.
ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲೊಂದರಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು. ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ಹು-ಧಾ ಪೊಲೀಸ್‌ ಆಯುಕ್ತರು ಎಸಿಪಿ ವಿನೋದ ಮುಕ್ತೇದಾರ ನೇತೃತ್ವದಲ್ಲಿ ಐದು ತನಿಖಾ ತಂಡ ರಚಿಸಿದ್ದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement