ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಹಠಾತ್ ಪ್ರವಾಹ: ನೋಡನೋಡುತ್ತಲೇ ಕೊಚ್ಚಿಹೋಗಿ 8 ಮಂದಿ ಸಾವು : ದೃಶ್ಯ ಕ್ಯಾಮರಾದಲ್ಲಿ ಸೆರೆ

ಕೋಲ್ಕತ್ತಾ: ಕಳೆದ ರಾತ್ರಿ ದುರ್ಗಾ ಮಾತೆಯ ಮೂರ್ತಿ ವಿಸರ್ಜನೆ ವೇಳೆ ಪಶ್ಚಿಮ ಬಂಗಾಳದ ಮಾಲ್ ನದಿಗೆ ಹಠಾತ್ ಪ್ರವಾಹ ಬಂದು ಕನಿಷ್ಠ ಎಂಟು ಜನರು ನೀರಿನಲ್ಲಿ ಮುಳುಗಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುದವಾರ ಸಂಜೆ ನದಿಯ ದಡದಲ್ಲಿ ನೂರಾರು ಮಂದಿ ದುರ್ಗಾ ಮೂರ್ತಿ ವಿಸರ್ಜೆನೆಗೆ ಜಮಾಯಿಸಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋದಾರ ತಿಳಿಸಿದ್ದಾರೆ. ಬುಧವಾರ ರಾತ್ರಿ 8:30ರ ಸುಮಾರಿಗೆ ವಿಸರ್ಜನೆ ವೇಳೆ ಪಾಲ್ಗೊಳ್ಳಲು ನದಿಯ ದಡದಲ್ಲಿ ಜನಸಾಗರವೇ ನೆರೆದಿದ್ದ ವೇಳೆ ಈ ಅಹಿತಕರ ಘಟನೆ ನಡೆದಿದೆ. ಎಂದು ಬಸು ತಿಳಿಸಿದ್ದಾರೆ.

ನದಿಯಲ್ಲಿ ಇದ್ದಕ್ಕಿದ್ದಂತೆ, ಹಠಾತ್ ಪ್ರವಾಹ ಉಂಟಾಗಿದೆ ಮತ್ತು ಜನರು ಪ್ರವಾಹದಲ್ಲಿ ಕೊಚ್ಚಿಹೋದರು. ಇದುವರೆಗೆ ಎಂಟು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಸುಮಾರು 50 ಜನರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಸ್ಥಳೀಯ ಆಡಳಿತದ ತಂಡಗಳಿಂದ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಘಟನೆಯ ದೃಶ್ಯಗಳು ಜನರು ನದಿಯ ಪ್ರವಾಹದ ವಿರುದ್ಧ ಹೋರಾಟ ನಡೆಸಿ ದಡಕ್ಕೆ ತೆರಳಲು ಪ್ರಯತ್ನಿಸುತ್ತಿರುವುದನ್ನು ತೋರಿಸಿದೆ. ಕೆಲವರು ತಮ್ಮನ್ನು ತಾವು ಉಳಿಸಿಕೊಳ್ಳಲು ಇತರರಿಗೆ ಅಂಟಿಕೊಂಡಿದ್ದರಿಂದ ಅವರಲ್ಲಿ ಅನೇಕರು ಕೊಚ್ಚಿಹೋಗುತ್ತಿರುವುದು ಕಂಡುಬರುತ್ತದೆ.

ಮಾಲ್ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಬಂಗಾಳದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬುಲು ಚಿಕ್ ಬರೈಕ್, ಸಹ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಘಟನೆ ಸಂಭವಿಸಿದಾಗ ನಾನು ಸ್ಥಳದಲ್ಲಿಯೇ ಇದ್ದೆ. ಹಲವಾರು ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಮತ್ತು ನೀರಿನ ಪ್ರವಾಹವು ತುಂಬಾ ಪ್ರಬಲವಾಗಿತ್ತು. ಘಟನೆ ನಡೆದಾಗ ನೂರಾರು ಜನರು ಇದ್ದರು. ಹಲವರು ಇನ್ನೂ ಕಾಣೆಯಾಗಿದ್ದಾರೆ” ಎಂದು ಅವರು ಹೇಳಿದರು. ಬರೈಕ್ ಮತ್ತು ಹಿರಿಯ ತೃಣಮೂಲ ನಾಯಕರು ರಕ್ಷಣಾ ಕಾರ್ಯವನ್ನು ನೋಡಿಕೊಳ್ಳುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. “ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು ಎಂದು ಪ್ರಧಾನ ಮಂತ್ರಿ ಸಂತಾಪ ಸೂಚಿಸಿದ್ದಾರೆ.

ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರು ರಕ್ಷಣಾ ಪ್ರಯತ್ನಗಳನ್ನು ಹೆಚ್ಚಿಸುವಂತೆ ರಾಜ್ಯ ಆಡಳಿತವನ್ನು ವಿನಂತಿಸಿದ್ದಾರೆ.
ದುರ್ಗಾಪೂಜೆಯ ನಂತರ ಮೂರ್ತಿಗಳ ವಿಸರ್ಜನೆ ವೇಳೆ ಮಾಲ್ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಜಲ್ಪೈಗುರಿಯಿಂದ ಬಂದ ದುಃಖದ ಸುದ್ದಿ ಅನೇಕ ಜನರನ್ನು ದುಃಖದಲ್ಲಿ ಮುಳುಗಿಸಿದೆ. ಇಲ್ಲಿಯವರೆಗೆ ಕೆಲವು ಸಾವುಗಳು ವರದಿಯಾಗಿವೆ. ಜಿಲ್ಲಾಧಿಕಾರಿಗೆ ತುರ್ತಾಗಿ ರಕ್ಷಣಾ ಪ್ರಯತ್ನಗಳನ್ನು ಹೆಚ್ಚಿಸಲು ಮತ್ತು ಸಂಕಷ್ಟದಲ್ಲಿರುವವರಿಗೆ ನೆರವು ನೀಡಲು ನಾನು ವಿನಂತಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement