ಧಾರವಾಡ: ಉದ್ಯಮಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ (81) ಇಂದು, ಗುರುವಾರ ಬೆಳಗಿನ ಜಾವ ನಿಧನರಾದರು.
ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಹಿರಿಯ ಸಹೋದರ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬುಧವಾರ ಶಿವಣ್ಣ ಬೆಲ್ಲದ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರ ಕಾರು ಉಪನಗರ ಪೊಲೀಸ್ ಠಾಣೆ ಬಳಿ ಬಂದಾಗ ಡಿವೈಡರ್ ಗೆ ಗುದ್ದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಶಿವಣ್ಣ ಅವರು ಕಾರು ಡೀಲರ್ ಉದ್ಯಮದ ಜೊತೆಗೆ ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯರಾಗಿದ್ದರು. ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಧಾರವಾಡದ ಲಿಂಗಾಯತ ಭವನ ನಿರ್ಮಾಣದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ