ಬೆಳಗಾವಿ : ಇಲ್ಲಿಯ ಉಜ್ವಲ ನಗರದ ಎರಡನೇ ಕ್ರಾಸ್ ತಿರಂಗಾ ಕಾಲೊನಿಯ ಅರ್ಮಾನ್ ದಫೇದಾರ್ (11) ಎಂಬ ಬಾಲಕ ಗಾಳಿಪಟ ಹಾರಿಸುವಾಗ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಈತ ನಿನ್ನೆ ಬುಧವಾರ,ಅಶೋಕ ನಗರದ ತಮ್ಮ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜೊತೆಗೆ ಬಂದಿದ್ದ. ತಿಂಡಿ ತಿಂದು ತನ್ನ ಅಣ್ಣನ ಜೊತೆಗೆ ಗಾಳಿಪಟ ಹಾರಿಸಲು ಬಿಲ್ಡಿಂಗ್ನ ಟೆರೇಸ್ ಮೇಲೆ ಹೋಗಿದ್ದಾನೆ. ಗಾಳಿಪಟ ಹಾರಿಸುವ ಭರಾಟೆಯಲ್ಲಿ ಆತ ಆಯತಪ್ಪಿ ಕಟ್ಟಡದಿಂದ ನೆಲಕ್ಕೆ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾನೆ.
ಮಗನನ್ನು ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮ ಕಾಮೆಂಟ್ ಬರೆಯಿರಿ