ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದ ಒಲವು – ಸಿ.ಟಿ. ರವಿ

ಬೆಂಗಳೂರು: ಎಸ್.ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.ಎಸ್.ಟಿ ಮೀಸಲಾತಿಯ ಪ್ರಮಾಣ ಹೆಚ್ಚಳ ಮಾಡುವ ಕುರಿತಾಗಿ ಅಕ್ಟೋಬರ್ 9ರ ಒಳಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಶುಕ್ರವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ವಾನುಮತದಿಂದ ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಆಗ್ರಹ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಪ್ರಮಾಣ ಏರಿಕೆ ಬಗ್ಗೆ ಕೋರ್ ಕಮಿಟಿ ಸಭೆ ಸರ್ವಾನುಮತದಿಂದ ಆಗ್ರಹಿಸಲಾಗಿದೆ. ಅಕ್ಟೋಬರ್ 9ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯ ಒಳಗಾಗಿ ಎಸ್‌ಟಿ‌ ಸಮುದಾಯದ ಮೀಸಲಾತಿ ಹೆಚ್ಚಳ ಬೇಡಿಕೆಗೆ ಪುರಸ್ಕಾರ ಮಾಡಿ‌  ಎಸ್.ಟಿ.ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳಕ್ಕೆ ಕೋರ್ ಕಮಿಟಿ ಆಗ್ರಹಿಸಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಹಿಂದಿನಿಂದಲೂ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಿತ ಚಿಂತನೆ ಮಾಡುತ್ತಾ ಬಂದಿದೆ. ಈ‌ ಹಿನ್ನಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡುವಂತೆ ತೀರ್ಮಾನ ಕೈಗೊಳ್ಳಲು ಆಗ್ರಹ ಮಾಡಲಾಗಿದೆ. ಪರಿಶಿಷ್ಟ ಜಾತಿ ಮೀಸಲಾತಿ ಕೂಡಾ ಚರ್ಚೆ ನಡೆದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು, ಮೀಸಲಾತಿ ಎಷ್ಟು ಪ್ರಮಾಣದಲ್ಲಿ ಏರಿಕೆ ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ. ಎಲ್ಲ ಮೀಸಲಾತಿ ವಿಚಾರವಾಗಿ ಈಗಾಗಲೇ ಸಮಿತಿ ‌ನೇಮಕ ಮಾಡಿದೆ. ಸಾಮಾಜಿಕ ನ್ಯಾಯ ಪಾಲನೆಗೆ ಬಿಜೆಪಿ ಬದ್ಧ ಎಂದು ತಿಳಿಸಿದರು.
ಕೋರ್ ಕಮಿಟಿ ಸಭೆಯಲ್ಲಿ ಹಿಂದುಳಿದ ವರ್ಗಗಳು, ಎಸ್‌ಸಿ, ಎಸ್‌ಟಿ, , ಯುವ ಹಾಗೂ ಮಹಿಳಾ ಸಮಾವೇಶದ ಕುರಿತು ಚರ್ಚೆ ಮಾಡಲಾಗಿದೆ. ಕಾರ್ಯಕ್ರಮದ ದಿನಾಂಕದ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಿ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement