ಟಿಪ್ಪು ಎಕ್ಸ್ ಪ್ರೆಸ್’ ರೈಲು ಹೆಸರು ಬದಲಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರುನಾಮಕರಣ

ಬೆಂಗಳೂರು: ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
ಅಕ್ಟೋಬರ್ 7 ರಂದು, ಅಧಿಸೂಚನೆಯಲ್ಲಿ, ಕೇಂದ್ರ ರೈಲ್ವೆ ಸಚಿವಾಲಯದ ಅಪೇಕ್ಷೆಯಂತೆ ರೈಲುಗಳ ಹೆಸರುಗಳನ್ನು ಬದಲಾವಣೆ ಮಾಡಲಾಗಿದೆ.

ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ಅನ್ನು ಒಡೆಯರ್ ಎಕ್ಸ್‌ಪ್ರೆಸ್ ಮತ್ತು 16221/16222 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ಅನ್ನು ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಹೇಳಲಾಗಿದೆ.
ಮೈಸೂರು ಬೆಂಗಳೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್‌ಪ್ರೆಸ್ ರೈಲು ಎಂದು ಬದಲಿಸಲು ಹಲವು ಪ್ರಯತ್ನಗಳು ನಡೆದಿತ್ತು.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಜುಲೈ ತಿಂಗಳಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ ನಂತರ ಈ ಕ್ರಮ ಬಂದಿದೆ. ಇದಕ್ಕೆ ಸ್ಪಂದಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಇಲಾಖೆಗೆ ಮಹತ್ವದ ಸೂಚನೆ ನೀಡಿದ್ದರು. ಈ ಕುರಿತು ರೈಲ್ವೇ ಉಪನಿರ್ದೇಶಕ ರಾಜೇಶಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement