ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಹೆಚ್ಚಳ ಮಾಡಿದೆ.
ತುಟ್ಟಿಭತ್ಯೆಯನ್ನು ಶೇಕಡಾ 3.75 ರಷ್ಟು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಜುಲೈ 2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 3.75 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟರ್‌ ಮೂಲಕ ಶುಕ್ರವಾರ ಮಾಹಿತಿ ನೀಡಿದೆ.
ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1, 2022 ರಿಂದಲೇ ಜಾರಿಗೆ ಬರುವಂತೆ ಶೇ.27.25 ರಿಂದ ಶೇ.31ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿರ್ಧಾರದಿಂದಾಗಿ ಸರ್ಕಾರಕ್ಕೆ ₹1,282.72 ಕೋಟಿ ಹೆಚ್ಚುವರಿ ಹೊರಬೀಳಲಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮತ್ತು ಡಿಆರ್ ಅನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು. ಅದರ ಬೆನ್ನಿಗೇ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಈ ತುಟ್ಟಿಭತ್ಯೆಗಳು ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತಗಳ ಪೂರ್ಣಾವಧಿ ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿವು ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೂ, ವಿವಿಯ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ಈ ಆದೇಶ ಅನ್ವಯಿಸುತ್ತದೆ ಎಂದಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement