ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸೂಕ್ತ ಚಿಕಿತ್ಸೆ

ಮೈಸೂರು: ಗಾಯಗೊಂಡ ಆನೆ ಮರಿಗೆ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬರೆದಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ ಸ್ಪಂದಿಸಿದ್ದು, ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ  ಆನೆ ಮರಿಗೆ ಚಿಕಿತ್ಸೆ ನೀಡಲಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಅಕ್ಟೋಬರ್‌ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಫಾರಿ ವೇಳೆ ಸೊಂಡಲು ಹಾಗೂ ಬಾಲಕ್ಕೆ ಗಾಯವಾಗಿ ನಿತ್ರಾಣಗೊಂಡಿದ್ದ ಆನೆ ಮರಿ ಗಮನಿಸಿ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಂದಿಸಿದ ನಂತರ ಗುರುವಾರ ಮರಿಯಾನೆಗೆ ಚಿಕಿತ್ಸೆ ನೀಡಲಾಯಿತು.

ಅಂತರಸಂತೆ ವನ್ಯ ಜೀವಿ ವಲಯದ ಬಿಸಿಲವಾಡಿ ಕೆರೆ ಬಳಿ ಆನೆ ಮರಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಮರಿಯಾನೆ ಸುಮಾರು 1 ತಿಂಗಳ ಗಂಡು ಮರಿಯಾಗಿದ್ದು ಸೊಂಡಿಲು, ಬೆನ್ನು ಹಾಗೂ ಬಾಲದಲ್ಲಿ ಗಾಯವಾಗಿತ್ತು. ಕಾಡು ನಾಯಿ ದಾಳಿ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ದಾಳಿ ವೇಳೆ ತಾಯಿ ಆನೆ ನಾಯಿಗಳನ್ನು ಓಡಿಸಿ ಓಡಿಸಿದೆ ಮರಿಯನ್ನು ಕಾಪಾಡಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

https://twitter.com/RahulGandhi/status/1577592701608169472?ref_src=twsrc%5Etfw%7Ctwcamp%5Etweetembed%7Ctwterm%5E1577592701608169472%7Ctwgr%5E1ef024355d52610d8d37bc37d7bb1fce74437bb0%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada
ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಅಧಿಕಾರಿಗಳು ಮತ್ತು ಪಶು ವೈದ್ಯ ಇಲಾಖೆ ವೈದ್ಯರಿಗೆ ತಾಯಿ ಆನೆ ಜೊತೆ ಮರಿ ಆನೆ ಬಿಸಿಲವಾಡಿ ಕೆರೆ ಬಳಿ ಕಂಡಿದೆ. ಕೂಡಲೇ ಬೇರೆ ಆನೆಗಳ ಸಹಾಯದಿಂದ ಮರಿಯನ್ನು ತಾಯಿಯಿಂದ ಬೇರ್ಪಡಿಸಿ ಚಿಕಿತ್ಸೆ ನೀಡಲಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement