ಸರ್ವಪಕ್ಷ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಇಂದು, ಶುಕ್ರವಾರ ನಗರದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮೋಹನ್‌ ದಾಸ್‌ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ. ನಾಳೆಯೇ ಸಂಪುಟ ಸಭೆ ಕರೆಯಲಾಗುತ್ತಿದ್ದು, ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ಅಧಿಕೃತ ಆದೇಶದ ಮುದ್ರೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ. ಎರಡೂ ಸಮುದಾಯಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ನಾಗಮೋಹನ ದಾಸ್ ಆಯೋಗ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಗಳ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮೀಸಲಾತಿ ಪ್ರಮಾಣ ಶೇಕಡ ಶೇ.50ಕ್ಕೂರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಕರ್ನಾಟಕದ ಮೀಸಲಾತಿ ವಿಷಯವನ್ನು ಸೇರಿಸಿದರೆ ನ್ಯಾಯಾಲಯದ ಪರಿಶೀಲನೆ ವ್ಯಾಪ್ತಿಯಿಂದ ಹೊರಗಿಡಲು ಸಾಧ್ಯ. ಹೀಗಾಗಿ ಅದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈಗಿರುವ ಎಲ್ಲ ವರ್ಗಳ ಮೀಸಲಾತಿ ಕಡಿಮೆ ಮಾಡುವುದಿಲ್ಲ, ಅದು ಮುಂದುವರಿಯಲಿದೆ. ಶೇ.50ಕ್ಕೂ ಮೇಲೆ ಮೀಸಲಾತಿ ಕೊಡುತ್ತೇವೆ. ಆರ್ಥಿಕವಾಗಿ ಅಶಕ್ತರಿಗೆ (EWS) ಕೋಟಾ ಈಗಾಗಲೇ ಇದೆ. ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದ್ದು ಆದೇಶ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಜಾತಿ ಹಾಗೂ ವರ್ಗಗಳಿಗೆ ಸಮಸ್ಯೆ ಆಗದಂತೆ, ಅನ್ಯಾಯ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ಎಸ್.ಸಿ ಮತ್ತು ಎಸ್.ಟಿ ಒಳ‌ ಮೀಸಲಾತಿಗೆ ಸಂಬಂಧಿಸಿದಂತೆಯೂ ಹಲವು ಬೇಡಿಕೆಗಳಿವೆ. ಹಾಗೆಯೇ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪರಿಷ್ಕರಣೆ ಹಾಗೂ ವಿವಿಧ ಸಮುದಾಯಗಳ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗ ಹಾಗೂ ಸುಭಾಷ ಅಡಿ ಸಮಿತಿಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ವರದಿಗಳನ್ನು ನೀಡಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ವಪಕ್ಷಗಳ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಆರ್ಾಶೋಕ, ಮಾಧುಸ್ವಾಮಿ, ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್‌.ಅಂಗಾರ, ಕಾಂಗ್ರೆಸ್‌ ಶಾಸಕರಾದ ಅಜಯ ಧರ್ಮ ಸಿಂಗ್‌, ಯು.ಟಿ.ಖಾದರ್‌, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ, ವಿ.ಎಸ್‌.ಉಗ್ರಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಪಾಲ್ಗೊಂಡಿದ್ದರು.
ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಸಮಿತಿಯು ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಲು ಎಸ್‌ಟಿ ಮೀಸಲಾತಿ ಹೆಚ್ಚಿಸಲು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿತ್ತು.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement