ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದು ಶನಿವಾರ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಆದೇಶದ ಮೂಲಕ ಈ ನಿರ್ಧಾರವನ್ನು ಜಾರಿಗೆ ತರಲಾಗುವುದು. ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲಾಗುವುದು, ಮೇಸಲಾತಿ ಹೇಗೇಗೆ ಮತ್ತು ಯಾವ ಪ್ರಮಾಣದಲ್ಲಿ ಇರುತ್ತದೆ ಎಂಬ ಬಗ್ಗೆಆದೇಶದಲ್ಲಿ ವಿವರವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಜನಸಂಖ್ಯೆಗನುಗುಣವಾಗಿ ಈ ನಿರ್ಧಾರ ಮಾಡಲಾಗಿದೆ. ಬೇರೆ ಸಮುದಾಯದ ಬಗ್ಗೆಯೂ ಚಿಂತನೆ ಮಾಡುತ್ತಿದ್ದೇವೆ. ವೈಜ್ಞಾನಿಕ ಅಧ್ಯಯನ ಮಾಡಿದ ಮೇಲೆ ಬೇರೆ ಸಮುದಾಯದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಒಳ ಮೀಸಲಾತಿ ಪರಿಶೀಲನೆ ಬಗ್ಗೆಯೂ ನಿರ್ಧಾರ…
ಸದಾಶಿವ ವರದಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿ ಜಾರಿ ಬಗ್ಗೆ ಹೇಳಿದ್ದಾರೆ. ಹಾಗಾಗಿ ಕಾನೂನು ಸಚಿವರ ಅಧ್ಯಕ್ಷತೆಯಲ್ಲಿ ವರದಿ ಸಿದ್ಧಪಡಿಸಲು ಕಾನೂನು ಇಲಾಖೆಗೆ ಜವಾಬ್ದಾರಿ ಕೊಡಲಾಗಿದೆ.ವರದಿ ಬಗ್ಗೆ ಯಾವುದೇ ಸಮಯ ನಿಗದಿಯಾಗಿಲ್ಲ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು. ಇಂದು ಕೇವಲ ಎಸ್​​ಸಿ, ಎಸ್​ಟಿ ಮೀಸಲಾತಿ ಬಗ್ಗೆ ಮಾತ್ರ ಚರ್ಚೆ ನಡೆದಿದೆ ಎಂದು ಮಾಧುಸ್ವಾಮಿ ತಿಳಿಸಿದರು.
ಮೀಸಲಾತಿ ಹೆಚ್ಚಳ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸರ್ವ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಜಾರಿಗೆ ತರಲು ಒಮ್ಮತದ ಅಭಿಪ್ರಾಯ ವ್ಯಕ್ತವಾಗಿತ್ತು.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement