ನಾಸಿಕ್ ಬಳಿ ಹೊತ್ತಿ ಉರಿದ ಬಸ್: 11 ಪ್ರಯಾಣಿಕರು ಸಜೀವ ದಹನ, 38 ಮಂದಿಗೆ ಗಾಯ

ನಾಸಿಕ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಂದು, ಶನಿವಾರ ಮುಂಜಾನೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹನ್ನೊಂದು ಮಂದಿ ಮೃತಪಟ್ಟಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಸಾವಿಗೀಡಾದವರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್ ಬಸ್‌ನ ಪ್ರಯಾಣಿಕರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ನಾಸಿಕ್‌ನ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ಹೇಳಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದರು.
ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಬೆಂಕಿಯ ದೊಡ್ಡ ಚೆಂಡು ಬಸ್‌ಗೆ ಆವರಿಸಿರುವುದನ್ನು ವೀಡಿಯೊಗಳು ತೋರಿಸಿವೆ.

ಪ್ರತ್ಯಕ್ಷದರ್ಶಿಗಳು ಬೆಳಿಗ್ಗೆ 5.15 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದು, ನಂತರ ಅವರು ಪೊಲೀಸರು ಮತ್ತು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. ಬೆಂಕಿ ಎಷ್ಟು ತೀವ್ರವಾಗಿದೆ ಎಂದರೆ ಪ್ರಯಾಣಿಕರನ್ನು ರಕ್ಷಿಸಲು ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.
ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ ₹ 2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹ 50,000 ನೀಡಲಾಗುತ್ತದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದು ರಾಜ್ಯ ಸಚಿವ ದಾದಾ ಭೂಸೆ ಹೇಳಿದ್ದಾರೆ.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   'ತಾರಕ್ ಮೆಹ್ತಾ' ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement