ಬೆಂಗಳೂರು: ಸೋಮವಾರದಿಂದ ಮತ್ತೆ ಒತ್ತುವರಿ ತೆರವು ಕಾರ್ಯಚರಣೆ

ಬೆಂಗಳೂರು: ದಸರಾ ಹಬ್ಬದ ಅಂಗವಾಗಿ ಬಿಡುವು ನೀಡಲಾಗಿದ್ದ ದೊಡ್ಡ ದೊಡ್ಡ ಕಟ್ಟಡಗಳ ಒತ್ತುವರಿ ತೆರವು ಕಾರ್ಯಚರಣೆ ಸೋಮವಾರದಿಂದ ಮತ್ತೆ ಆರಂಭವಾಗಲಿದೆ.
ಈಗಾಗಲೇ ಒತ್ತುವರಿದಾರ ಪಟ್ಟಿ ಸಿದ್ದಪಡಿಸಿಕೊಂಡಿರುವ ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಸೋಮವಾರದಿಂದ ಒತ್ತುವರಿ ತೆರವು ಕಾರ್ಯಚರಣೆಯನ್ನು ಮತ್ತೆ ಆರಂಭಿಸಲು ನಿರ್ಧರಿಸಿದ್ದಾರೆ. ಮಳೆ ಬಂದಾಗ ಬಿಬಿಎಂಪಿ ವಿರುದ್ಧ ಹೇಳಿಕೆ ನೀಡುವ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಸಂಸ್ಥೆಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವುದು ಸಾಬೀತಾಗಿರುವುದರಿಂದ ಸೋಮವಾರದಿಂದ ಎಲ್ಲ ರೀತಿಯ ಒತ್ತುವರಿ ತೆರವು ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಒತ್ತುವರಿ ತೆರವುಗೊಳಿಸುವ ಅಧಿಕಾರಿಗಳಿಗೆ ಮುಕ್ತ ಅಧಿಕಾರ ನೀಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ನಾವು ಎಂತಹ ದೊಡ್ಡ ವ್ಯಕ್ತಿಗಳೂ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದರೂ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ.

 

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement