ನಮ್ಮ ಬಿಜೆಪಿ ಆಡಳಿತದಲ್ಲಿ ಟಿಪ್ಪು ಹೆಸರನ್ನು ಯಾವುದಕ್ಕೂ ಬಳಕೆ ಮಾಡುವುದಿಲ್ಲ: ಎನ್.ರವಿಕುಮಾರ

ರಾಯಚೂರು: ಬಿಜೆಪಿ (BJP) ಆಡಳಿತದಲ್ಲಿ ಬಸ್, ಟ್ರೈನ್ ಸೇರಿದಂತೆ ಯಾವುದಕ್ಕೂ ಟಿಪ್ಪು ಹೆಸರನ್ನು ಇಡುವುದಿಲ್ಲ. ಟಿಪ್ಪು ಒಬ್ಬ ಧರ್ಮಾಂಧ, ದೇವಸ್ಥಾನಗಳನ್ನು ನಾಶ ಮಾಡಿದಂತಹ ವ್ಯಕ್ತಿ ಎಂದು ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಟಿಪ್ಪು ಎಕ್ಸ್‌ಪ್ರೆಸ್ ಬದಲು ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ಆಡಳಿತದ ಅವಧಿಯಲ್ಲಿ ಟಿಪ್ಪು ಹೆಸರನ್ನು ಯಾವುದಕ್ಕೂ ಬಳಕೆ ಮಾಡುವುದಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಯಚೂರಿನಿಂದ ಸಂಕಲ್ಪ ಯಾತ್ರೆ ಶುರುವಾಗಲಿದೆ. ಗಿಲ್ಲೇಸೂಗೂರು ಗ್ರಾಮದಿಂದ ಜನ ಸಂಕಲ್ಪ ಯಾತ್ರೆ ಶುರುವಾಗಲಿದ್ದು, ಯಾತ್ರೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಹೆಚ್ಚಳಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆದಿತ್ತು. ಆದರೆ ಯಾವ ಸರ್ಕಾರವೂ ಮಾಡಿರಲಿಲ್ಲ. ಆದರೆ ಈಗ ಬಿಜೆಪಿ ಸರ್ಕಾರ ಅದನ್ನು ಹೆಚ್ಚಿಸಿ ಬದ್ಧತೆ ತೋರಿದೆ. ತಳ ಸಮುದಾಯಗಳ ಒಳಿತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ಮೀಸಲಾತಿ ಹೆಚ್ಚಳದ ಬಳಿಕ ಮೊದಲ ಕಾರ್ಯಕ್ರಮ ಗಿಲ್ಲೇಸೂಗೂರು ಗ್ರಾಮದಲ್ಲಿ ನಡೆಯುತ್ತದೆ. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸನ್ಮಾನ ಮಾಡುವ ಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement