ವಿದ್ಯುತ್ ಸ್ಪರ್ಶ: ಮೂವರು ಮಕ್ಕಳು ಸೇರಿ ಐವರು ಸಾವು

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಹೈ ಟೆನ್ಷನ್ ವೈರ್‌ನ ಸ್ಪರ್ಶದಿಂದ ಮೂವರು ಮಕ್ಕಳು ಸೇರಿದಂತೆ ಐವರು ಭಾನುವಾರ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಹಾಗೂ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನನ್ಪಾರಾ ಪ್ರದೇಶದ ಮಸುಪುರ್ ಗ್ರಾಮದಲ್ಲಿ ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು, ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಗಾಡಿಯಲ್ಲಿ ಇರಿಸಲಾಗಿದ್ದ ಕಬ್ಬಿಣದ ರಾಡ್ ತಂತಿಗೆ ತಗುಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಗಾಯಾಳು ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ. ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement