ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ  ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು, ಅಕ್ಟೋಬರ್‌ 10ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ
ಅಲ್ಲದೆ, ಅಕ್ಟೋಬರ್‌ 11 ಮತ್ತು 12ರಂದು ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ 15 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ವಿಶೇಷವಾಗಿ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

 

 

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement