ಬಾಡಿಗೆ ತಾಯ್ತನದ ಮೂಲಕ ಪಡೆದ ಅವಳಿ ಮಕ್ಕಳನ್ನು ಸ್ವಾಗತಿಸಿದ ಮರುದಿನ ನಟಿ ನಯನತಾರಾ-ವಿಘ್ನೇಶ ದಂಪತಿಗೆ ಎದುರಾಯ್ತು ಸಂಕಷ್ಟ…! ​

ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದು, ಈಗ ಅವರಿಗೆ ಸಂಕಷ್ಟ ತಂದೊಡ್ಡಿದೆ.
ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ನಿಯಮಗಳನ್ನು ರೂಪಿಸಿದ್ದು, ಇವುಗಳನ್ನು ನಯತಾರಾ ಹಾಗೂ ವಿಘ್ನೇಶ್ ದಂಪತಿ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನಕ್ಕೆ ಆಯ್ಕೆ ಮಾಡಬಹುದಾಗಿದೆ.

ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಬಗ್ಗೆ ತನಿಖೆ ನಡೆಸಲಿದೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಪ್ರೀತಿಸಿ ಮದುವೆ ಆದ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ದಂಪತಿ ಬಾಡಿಗೆ ತಾಯಿ ಮೂಲಕ ಜನಿಸಿರುವ ಅವಳಿ ಗಂಡು ಮಕ್ಕಳಿಗೆ ಉಯಿರ್​ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್​ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್​ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್​ ಶಿವನ್​ ಪೋಸ್ಟ್​ ಮಾಡಿದ್ದರು.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement