ಉತ್ತರ ಕನ್ನಡದಲ್ಲಿ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ: ಮಿರ್ಜಾನ್‌ನಲ್ಲಿ ಸ್ಥಳ ಪರಿಶೀಲಿಸಿದ ಆರೋಗ್ಯ ಸಚಿವ ಸುಧಾಕರ

 ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾ ತಾಲೂಕಿನ ಮೂರು ಕಡೆ ಆರೋಗ್ಯ ಸಚಿವ ಡಾ. ಸುಧಾಕರ ಅವರು ಇಂದು ಮಂಗಳವಾರ ಜಾಗ ಪರಿಶೀಲನೆ ಮಾಡಿದರು.
ಕುಮಟಾ ತಾಲೂಕಿನ ಮಿರ್ಜಾನ ಸಮೀಪದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸುಧಾಕರ ಅವರು ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಲು ಜಿಲ್ಲೆಯಲ್ಲಿ ಮೂರು ಸ್ಥಳಗಳನ್ನು ನೋಡಿದ್ದೇವೆ. ಇದರಲ್ಲಿ ಮಿರ್ಜಾನ ಜಾಗವೂ ಒಂದು ಎಂದು ತಿಳಿಸಿದರು.

ಜಿಲ್ಲೆಯ ಹೆಚ್ಚು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚು ಮಧ್ಯವರ್ತಿ ಸ್ಥಳದಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕುಮಟಾ ತಾಲೂಕಿನ ಮಿರ್ಜಾನನಲ್ಲಿ ಜಾಗ ಪರಿಶೀಲನೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಕುರಿತು ಮಾತನಾಡಿ ಶೀಘ್ರದಲ್ಲಿಯೇ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಇದ್ದು ಮಿರ್ಜಾನ ಸಮೀಪದ ಸ್ಥಳವು ಆಸ್ಪತ್ರೆ ನಿರ್ಮಿಸಲು ಹೆಚ್ಚು ಸೂಕ್ತವಾಗಿದೆ ಎಂಬ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರು. ಇದು ಜಿಲ್ಲೆಯ ಮಧ್ಯವರ್ತಿ ಸ್ಥಳ, ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸ್ಟೇಶನ್, ಇತ್ಯಾದಿ ಸೌಲಭ್ಯಗಳಿವೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ, ಅಧಿಕಾರಿಗಳು, ಹಾಗೂ ಸ್ಥಳೀಯ ಮುಖಂಡರು ಇದ್ದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement