ನವದೆಹಲಿ: ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ನ್ಯಾಯಮೂರ್ತಿ ಎ.ಎಂ. ಮಾರ್ಗೆ ಅವರನ್ನು ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ ರಿಜಿಜು ಟ್ವೀಟರ್ನಲ್ಲಿ ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಂಕಜ್ ಮಿತ್ತಲ್ ಅವರನ್ನು ರಾಜಸ್ತಾನ ಹೈಕೋರ್ಟ್ನ ಅದೇ ಹುದ್ದೆಯಲ್ಲಿ ವರ್ಗಾವಣೆ ಮಾಡಲಾಗಿದೆ.
ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರನ್ನು ರಾಜಸ್ತಾನ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂ ಕಳೆದ ತಿಂಗಳು ಈ ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ ಕುರಿತು ಅಧಿಸೂಚನೆ ಹೊರಡಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ